ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪ ಚುನಾವಣೆ-ಜೆಡಿಎಸ್ ಯಾವ ಲೆಕ್ಕಕ್ಕೂ ಇಲ್ಲ: ದೇಶಪಾಂಡೆ (BJP | JDS | Desh pandy | Congress | Yeddyurappa | Kumaraswmay)
Bookmark and Share Feedback Print
 
ಗುಲ್ಬರ್ಗ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ನೇರ ಹಣಾಹಣಿ ನಡೆಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಜೆಡಿಎಸ್ ಯಾವ ಲೆಕ್ಕಕ್ಕೂ ಇಲ್ಲ. ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ಮುಖಂಡರ ಬಣ್ಣ ಬಯಲಾಗಿದೆ. ಬಿಜೆಪಿ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಅವಕಾಶ ನೀಡಿದ್ದೇ ಜೆಡಿಎಸ್ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಗಳೂರು-ಬಳ್ಳಾರಿ ಪಾದಯಾತ್ರೆ ಮಾಡಿದರೆ ಜೆಡಿಎಸ್ ರಾಜ್ಯ ಅಧ್ಯಕ್ಷರೂ ಸೇರಿದಂತೆ ಆ ಪಕ್ಷದ ಎಲ್ಲ ಮುಖಂಡರು ಟೀಕಿಸಿದರು. ಜೆಡಿಎಸ್‌ನವರು ಒಮ್ಮೆ ಬಿಜೆಪಿ ಪರ ಮಾತನಾಡುತ್ತಾರೆ. ಮತ್ತೊಮ್ಮೆ ಟೀಕೆ ಮಾಡ್ತಾರೆ. ಕಾಂಗ್ರೆಸ್ ಪರ, ವಿರೋಧ ಮಾತನಾಡುತ್ತಾರೆ. ಜೆಡಿಎಸ್‌ನಲ್ಲಿ ಸ್ಪಷ್ಟತೆ ಇಲ್ಲ. ಆದ್ದರಿಂದ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ 7-8 ಜನ ಆಕಾಂಕ್ಷಿಗಳಿದ್ದರೂ ಯುವಕ, ಕ್ರಿಯಾಶೀಲ ಕಾರ್ಯಕರ್ತ ಡಾ.ಅಜಯ್ ಸಿಂಗ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ. 1999ರಿಂದ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದು, ಕಡೂರು, ಗುಲ್ಬರ್ಗ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಯ್ತು. ಸುಳ್ಳು ಭರವಸೆ, ಜಾಹೀರಾತು ಆಧಾರದ ಮೇಲೆ ನಡೆಯುತ್ತಿದೆ. ಆಡಳಿತ ಯಂತ್ರ ಕುಸಿದಿದೆ. ಎಸ್.ಎಂ.ಕೃಷ್ಣ, ಧರ್ಮಸಿಂಗ್ ಸರಕಾರದ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಪ್ರಮುಖ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ