ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ನಮ್ಮ ನಾಯಕ-ಡಿಸಿಎಂ ಅಗತ್ಯವಿಲ್ಲ: ರೇಣುಕಾಚಾರ್ಯ (Yeddyurappa | Renukacharya | DCM | BJP | Ishwarappa)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮರ್ಥವಾಗಿ ಆಡಳಿತ ನಡೆಸುತ್ತಿರುವ ನಿಟ್ಟಿನಲ್ಲಿ ಅವರಿಗೆ ಪರ್ಯಾಯ ನಾಯಕತ್ವ ಬೇಡ ಎಂದು ನಾಲ್ವರು ಸಚಿವರು ಅಭಿಪ್ರಾಯವ್ಯಕ್ತಪಡಿಸಿದ್ದು, ಹಾಗಾಗಿ ಉಪಮುಖ್ಯಮಂತ್ರಿ ಹುದ್ದೆಯ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ, ರೇಷ್ಮೆ ಸಚಿವ ವೆಂಕಟರಮಣಪ್ಪ, ಜವಳಿ ಸಚಿವ ಗೂಳಿಹಟ್ಟಿ ಶೇಖರ್ ಹಾಗೂ ಗ್ರಂಥಾಲಯ ಸಚಿವ ಶಿವನಗೌಡ ನಾಯಕ ಅವರು ಸೋಮವಾರ ವಿಧಾನಸೌಧದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರಕಾರ ತುಂಬಾ ಉತ್ತಮವಾಗಿ ನಡೆಯುತ್ತಿದೆ. ನಾವೆಲ್ಲ ಅವರ ಬೆಂಬಲಕ್ಕಿದ್ದೇವೆ. ಆದರೆ ಉಪಮುಖ್ಯಮಂತ್ರಿ ಹುದ್ದೆಯ ಸೃಷ್ಟಿಗೆ ನಮ್ಮ ತೀವ್ರ ವಿರೋಧ ಇದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಲು ಪ್ರಯತ್ನಿಸಿ ಸುಗಮವಾಗಿ ನಡೆಯುತ್ತಿರು ಸರಕಾರದಲ್ಲಿ ಗೊಂದಲ ಹುಟ್ಟುಹಾಕುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಖಾರವಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗುತ್ತದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ, ಉಪಮುಖ್ಯಮಂತ್ರಿ ನೇಮಕ ಇಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಕೂಡ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಲಗಾಮು ಹಾಕಲು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಹುನ್ನಾರ ನಡೆಸಲಾಗುತ್ತಿದೆ ಎಂಬ ಊಹಾಪೋಹಗಳು ಕೇಳಿಬಂದಿತ್ತು.
ಸಂಬಂಧಿತ ಮಾಹಿತಿ ಹುಡುಕಿ