ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರಕಾರದ ವಿರುದ್ಧ ಆಕ್ರೋಶ: ಧರಣಿ ನಿರತ ಮಹಿಳೆ ಮೇಲೆ ಆಸಿಡ್ ದಾಳಿ (Hassan | Congress | JDS | Yeddyurappa | High court)
Bookmark and Share Feedback Print
 
ವೈದ್ಯಕೀಯ ಕಾಲೇಜಿನ ಸಿಬ್ಬಂದಿ ವಜಾ ಪ್ರಕರಣವನ್ನು ವಿರೋಧಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರ ಮೇಲೆ ಅಪರಿಚಿತರು ಆಸಿಡ್ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಏತನ್ಮಧ್ಯೆ ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರಣಿಯಲ್ಲಿ ಪಾಲ್ಗೊಂಡಿದ್ದ ಮಂಜುಳಾ ಎಂಬಾಕೆ ಮೇಲೆ ಅಪರಿಚಿತರು ಈ ಕೃತ್ಯ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಮಂಜುಳಾ ಅವರ ಎದೆಯ ಮೇಲೆ ಸುಟ್ಟ ಗಾಯಗಳಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಆಸಿಡ್ ದಾಳಿ ನಡೆದಿದ್ದರೂ ಕೂಡ ಜಿಲ್ಲಾ ಉಸ್ತುವಾರಿ ಸಚಿವ ಬಚ್ಚೇಗೌಡರಾಗಲಿ, ಸಚಿವ ರಾಮಚಂದ್ರಗೌಡರು ಭೇಟಿಯೇ ನೀಡಿಲ್ಲ. ಒಂದು ವೇಳೆ ಶಿವಮೊಗ್ಗ, ಬಳ್ಳಾರಿಯಲ್ಲಿ ಈ ರೀತಿ ಆಗಿದ್ದರೆ ಸಚಿವರು ಹೀಗೆ ನಿರ್ಲಕ್ಷ್ಯ ತೋರಿಸುತ್ತಿದ್ದರೆ ಎಂದು ವೈದ್ಯಕೀಯ ಕಾಲೇಜಿನ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರ, ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿದೆ ಎಂಬ ಕಾರಣಕ್ಕೆ ಆಡಳಿತರೂಢ ಸರಕಾರ ಯಾವುದೇ ವಿಷಯಕ್ಕೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಧರಣಿ ಕೈಬಿಡಿ-ಸಿಎಂ: ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಹಾಗಾಗಿ ಸಮಗ್ರ ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದು, ಮೆಡಿಕಲ್ ಕಾಲೇಜಿನ ಸಿಬ್ಬಂದಿಗಳು ಕೂಡಲೇ ಧರಣಿ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ