ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಪಕ್ಷದ ರಾಜ್ಯಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಜನಪ್ರಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಜನಮೆಚ್ಚುವಂತೆ ಅಡಳಿತ ನಡೆಸುತ್ತಿರುವುದರಿಂದ ಜನತೆ ಬಿಜೆಪಿಯತ್ತ ವಾಲುತ್ತಿದ್ದಾರೆ.ಗುಲ್ಬರ್ಗಾ ಮತ್ತು ಕಡೂರಿನಲ್ಲಿ ಜಯ ನಿಶ್ಚಿತ ಎಂದು ತಿಳಿಸಿದ್ದಾರೆ.
ಉಪಚುನಾವಣೆಗಳ ನಂತರ ಸಂಪುಟ ವಿಸ್ತರಣೆಗೆ ಚಾಲನೆ ದೊರೆಯಲಿದೆ. ಆದರೆ ಯಾವುದೇ ಕಾರಣಕ್ಕೆ ಉಪಮುಖ್ಯಮಂತ್ರಿ ಹುದ್ದೆ ತುಂಬುವ ಯೋಚನೆಗಳಿಲ್ಲ.ಇವೆಲ್ಲವು ಮಾಧ್ಯಮಗಳ ಉಹಾಪೋಹಗಳ ವರದಿಗಳ ಪರಿಣಾಮವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಹಾಸನ -ಮೈಸೂರು ವೈದ್ಯಕೀಯ ಕಾಲೇಜುಗಳಲ್ಲಿ ಭೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದರಿಂದ ಮುಖ್ಯಮಂತ್ರಿಗಳು ನೇಮಕಾತಿಯನ್ನು ರದ್ದುಗೊಳಿಸಿರುವುದು ಸೂಕ್ತ ಕ್ರಮವಾಗಿದೆ ಎಂದು ಕೆ.ಎಸ್ ಈಶ್ವರಪ್ಪ ಅಭಿಪ್ರಾಯಪಟ್ಟರು.