ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧ-ಬಿಜೆಪಿಗೆ ರಾಜಕೀಯ ದಾಳ: ಸಿಂಧ್ಯಾ (Sindya | JDS | Deve gowda | Kumaraswamy | Governor)
Bookmark and Share Feedback Print
 
ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಳ್ಳಲು ರಾಜ್ಯ ಬಿಜೆಪಿ ಸರಕಾರ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾಯಿದೆ ಜಾರಿಗೊಳಿಸದಂತೆ ಜೆಡಿಎಸ್ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಮಸೂದೆಗೆ ಸಹಿ ಹಾಕುವಂತೆ ಆಗ್ರಹಿಸಿ ಆಡಳಿತ ಪಕ್ಷ ಧರಣಿ ನಡೆಸಿದ್ದು, ಮಸೂದೆ ಜಾರಿ ರಾಜಕೀಯ ಪ್ರೇರಿತವಾಗಿದೆ ಎಂದು ಟೀಕಿಸಿದರು.

ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರಕಾರದ ಬಗ್ಗೆ ಜನ ಭ್ರಮನಿರಸನರಾಗಿದ್ದಾರೆ. ಈ ಸರಕಾರ ಸಮಾವೇಶಗಳಲ್ಲಿ ಕಾಲಹರಣ ಮಾಡುತ್ತಿದೆ. ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ. ರಾಜ್ಯಪಾಲರು ಎಚ್ಚರಿಸಿದ್ದರೂ ಪ್ರಯೋಜನವಾಗಿಲ್ಲ. ಲೋಕಾಯುಕ್ತ ರಾಜೀನಾಮೆಯಂತಹ ಪ್ರಕರಣ ಹಿಂದಿನ ಯಾವ ಸರಕಾರಗಳಲ್ಲೂ ನಡೆದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಎಚ್.ಡಿ.ಕುಮಾರಸ್ವಾಮಿ ಸರಕಾರದ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಿರುವ ಯಡಿಯೂರಪ್ಪ, ಬಡವರ ಸಮಸ್ಯೆಗೆ ಸ್ಪಂದಿಸಲು ಸಂಪೂರ್ಣ ವಿಫಲವಾಗಿದ್ದಾರೆ. ಕಾಂಗ್ರೆಸ್ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಗೆ ಹಿಂದುಳಿದವರು, ಅಲ್ಪಸಂಖ್ಯಾತರ ಬಗ್ಗೆ ಬದ್ಧತೆ ಇಲ್ಲ ಎಂದರು.

ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್, ಕುಮಾರಸ್ವಾಮಿ ಆಡಳಿತದಲ್ಲಿ ಹಿಂದುಳಿದ ವರ್ಗಗಳಿಗೆ ಅನೇಕ ಸವಲತ್ತು ಒದಗಿಸಲಾಗಿದೆ ಎಂದು ನೆನಪಿಸಿದರು. ಮಂತ್ರಿಗಳಿಗೆ ಚುನಾವಣೆ ಹೊಣೆ ನೀಡುವ ಮೂಲಕ ಅಡಳಿತ ಯಂತ್ರವನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ಚುನಾವಣೆಯಲ್ಲಿ ಗೆಲ್ಲುವ ಹುನ್ನಾರು ನಡೆಸಿದೆ. ಈವರೆಗಿನ ಮರು ಚುನಾವಣೆಗಳಲ್ಲಿ ಬಿಜೆಪಿ ಕೋಟ್ಯಂತರ ರೂ.ವ್ಯಯಿಸಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ