ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದನದ ಮಾಂಸ ತಿನ್ತೇನೆ, ತಪ್ಪೇನಿದೆ?: ಸಿದ್ದರಾಮಯ್ಯ (Siddaramaiah | Congress | BJP | By poll | JDS)
Bookmark and Share Feedback Print
 
ಆಡಳಿತರೂಢ ಬಿಜೆಪಿ ಪಕ್ಷ ಗೋ ಹತ್ಯೆ ನಿಷೇಧ ವಿಧೇಯಕ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಲು ಮುಂದಾಗಬಾರದು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಮಾಂಸ ತಿನ್ನುವವರ ಸಂಖ್ಯೆಯೇ ಅಧಿಕ. ನಾನು ಕೂಡ ದನದ ಮಾಂಸ ತಿನ್ನುತ್ತೇನೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಕಡೂರು ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಕೆಂಪರಾಜು ಪರ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೇವಲ ಒಂದು ವರ್ಗದ ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದರು. ಗೋ ಹತ್ಯೆ ನಿಷೇಧದಿಂದಾಗಿ ಗ್ರಾಮೀಣ ಪ್ರದೇಶದ ಆರ್ಥಿಕ ಪರಿಸ್ಥಿತಿಯಲ್ಲಿ ಪರಿಣಾಮ ಬೀರುತ್ತದೆ. ಮೂಳೆ ಮತ್ತು ಚರ್ಮದ ಉದ್ಯಮಕ್ಕೆ ಧಕ್ಕೆ ಉಂಟಾಗಲಿದೆ ಎಂದರು.

ಬಿಜೆಪಿ ಧಾರ್ಮಿಕ ಮನೋಭಾವದೊಂದಿಗೆ ಜನಸಾಮಾನ್ಯರ ಭಾವನೆಯ ಮೇಲೆ ಪರಿಣಾಮವಾಗುವಂತೆ ತಂತ್ರ ರೂಪಿಸಿ ಮತ ಸೆಳೆಯಲು ಗೋ ಹತ್ಯೆ ನಿಷೇಧದಂತಹ ಕಾಯ್ದೆ ಜಾರಿಗೆ ಮುಂದಾಗುವುದು ಜನವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮುಂದಿಟ್ಟು ಮತಯಾಚಿಸುವುದಾಗಿ ಬಿಜೆಪಿ ಹೇಳಿದೆ. ಅದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಡೂರಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಿಜೆಪಿಯೇ ಎದುರಾಳಿ ಹೊರತು ಜೆಡಿಎಸ್‌ನ ದತ್ತ ಎದುರಾಳಿ ಅಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ