ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚುನಾವಣಾ ಆಯೋಗ ರಾಜ್ಯ ಸರಕಾರ ಪರ ವರ್ತಿಸುತ್ತಿದೆ: ಎಚ್‌ಡಿಕೆ (Kumaraswmay | Election commission | JDS | Congress | Deve gowda)
Bookmark and Share Feedback Print
 
ರಾಜ್ಯ ಚುನಾವಣಾ ಆಯೋಗ ಬಿಜೆಪಿ ಸರಕಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗುಲ್ಬರ್ಗ ದಕ್ಷಿಣ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅರುಣಾ ಪಾಟೀಲ್ ಪರವಾಗಿ ಪ್ರಚಾರ ಮಾಡಲು ನಗರಕ್ಕೆ ಆಗಮಿಸಿರುವ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು, ಆದರೆ ಇಲ್ಲಿ ಹಾಗಾಗುತ್ತಿಲ್ಲ, ನಾವು ಕೆಲವು ವಿಷಯಗಳಲ್ಲಿ ಲಿಖಿತ ದೂರು ನೀಡಿದರೂ ಆಯೋಗದವರು ಕ್ರಮ ಕೈಕೊಂಡಿಲ್ಲವೆಂದ ಮೇಲೆ ಇವರನ್ನು ನಂಬುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಈ ಮರು ಚುನಾವಣೆ ಸುಸೂತ್ರವಾಗಿ ನಡೆಯಬೇಕೆಂದರೆ ಕೇಂದ್ರ ಚುನಾವಣಾ ಆಯೋಗ ವಿಶೇಷ ವೀಕ್ಷಕರನ್ನು ನೇಮಿಸಬೇಕೆಂದು ಅವರು ಮನವಿ ಮಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಬ್ಬ ಪಕ್ಕಾ ಸುಳ್ಳುಗಾರ, ಇವರು ಹೇಳುವುದೊಂದು ಮಾಡುವುದೊಂದು, ಇಂಥ ಮುಖ್ಯಮಂತ್ರಿಯನ್ನು ಜನ ನಂಬುವುದಾದರೂ ಹೇಗೆ? ಎಂದು ಪ್ರಶ್ನಿಸಿದರು.

ಹಿಂದಿನ ಸರಕಾರಗಳು ಏನೂ ಮಾಡಿಲ್ಲ, ಎಲ್ಲವನ್ನೂ ತಮ್ಮ ಸರಕಾರವೇ ಮಾಡಿದೆ ಎಂದು ಹೇಳುವ ಮೂಲಕ ಯಡಿಯೂರಪ್ಪನವರು ತಾವೊಬ್ಬ ಸುಳ್ಳಿನ ಸರದಾರ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.
ಸಂಬಂಧಿತ ಮಾಹಿತಿ ಹುಡುಕಿ