ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಳ್ಳಾರಿಯ ಅಧಿಕಾರಿಗಳನ್ನು ವರ್ಗ ಮಾಡಿ: ಸಿಎಂಗೆ ಸಿದ್ದು (Bellary | Yeddyurappa | BJP | Siddaramaiah | Congress | CC TV)
Bookmark and Share Feedback Print
 
ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಾಮಾಣಿಕವಾಗಿ ಯತ್ನಿಸುವುದಾದರೆ, ಮೊದಲು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳನ್ನು ವರ್ಗ ಮಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಚುನಾವಣೆ ಪ್ರಚಾರಕ್ಕೆಂದು ಕಡೂರಿಗೆ ತೆರಳುವ ಮಾರ್ಗ ಮಧ್ಯೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಅಕ್ರಮ ಗಣಿಗಾರಿಕೆ ತಡೆಯಲು ಆಂಧ್ರದ ಗಡಿ ಚೆಕ್‌ಪೋಸ್ಟ್‌ಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದಾಗಿ ಸಿಎಂ ಹೇಳಿರುವುದು ಅರ್ಥವಿಲ್ಲದ್ದು. ಇಂತಹ ಎಷ್ಟೇ ಕ್ರಮ ಕೈಗೊಂಡರೂ ಬಳ್ಳಾರಿ ಜಿಲ್ಲೆಯ ಅಧಿಕಾರಿಗಳ ಮುಂದೆ ಏನೂ ನಡೆಯದು ಎಂದ ಅವರು, ಅಕ್ರಮ ಗಣಿಗಾರಿಕೆ ಮತ್ತು ಬೇಲೆಕೇರಿ ಅದಿರು ಮಾಯ ಪ್ರಕರಣಗಳಲ್ಲಿ ಯಡಿಯೂರಪ್ಪ ಮತ್ತು ರೆಡ್ಡಿ ಸಹೋದರರ ಕೈವಾಡ ಇದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ 1964ರಲ್ಲೇ ಇತ್ತು. ಆ ಕಾಯಿದೆ ಪ್ರಕಾರ ಆರೋಗ್ಯವಂತ ಗೋವುಗಳನ್ನು ಕೊಲ್ಲುವುದು ಅಪರಾಧ. ಹೀಗಿದ್ದರೂ ಹೊಸದಾಗಿ ಮತ್ತೊಂದು ಕಾಯಿದೆ ಜಾರಿಗೊಳಿಸಿರುವುದು ಅವೈಜ್ಞಾನಿಕ ಕ್ರಮ ಎಂದ ಅವರು, ರಾಜ್ಯದ ಬಹುತೇಕ ಸರಕಾರಿ ಆಸ್ಪತ್ರೆಗಳಲ್ಲಿ ಚಿಕೂನ್ ಗುನ್ಯಾ, ಎಚ್1ಎನ್1 ಮತ್ತು ಡೆಂಗ್ಯೂಗೆ ಸೂಕ್ತ ಔಷಧ ಲಭ್ಯವಾಗದೇ ಸಮಸ್ಯೆಯಾಗಿದೆ. ಆದರೂ ಸರಕಾರ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಸೂಕ್ತ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಹಾಸನ ಮತ್ತು ಮೈಸೂರು ವೈದ್ಯ ಕಾಲೇಜುಗಳ ಸಿಬ್ಬಂದಿ ನೇಮಕ ಪ್ರಕ್ರಿಯೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆದಿತ್ತು. ಆದ್ದರಿಂದ ನೇಮಕ ರದ್ದು ಮಾಡಿರುವುದು ಸ್ವಾಗತಾರ್ಹ ಎಂದರು.
ಸಂಬಂಧಿತ ಮಾಹಿತಿ ಹುಡುಕಿ