ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಣಿ ಪರವಾನಿಗೆ-ಸಿಎಂ ನಿಜಬಣ್ಣ ಬಯಲು: ಕುಮಾರಸ್ವಾಮಿ (Kumaraswamy | BJP | Yeddyurappa | Congress | Ugrappa)
Bookmark and Share Feedback Print
 
ತಮ್ಮದು ಪರಿಶುದ್ಧ ರಾಜಕಾರಣ, ನಮ್ಮಿಂದ ತಪ್ಪಾಗಿದ್ದರೆ ನಾಳೆಯೇ ರಾಜೀನಾಮೆ ನೀಡಲು ಸಿದ್ದ ಎಂದು ಸುಳ್ಳು ಹೇಳಿಕೆ ನೀಡಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಜಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಾಯಿ ಮಂದಿರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಾವುದೇ ಒಂದು ಗಣಿಗಾರಿಕೆಗೂ ತಾವು ಶಿಫಾರಸು ಮಾಡಿಲ್ಲ ಎಂದು ಸುಳ್ಳು ಹೇಳಿ ಹಲವಾರು ಬಾರಿ ಹಲವು ರೀತಿ ದಿಕ್ಕು ತಪ್ಪಿಸುತ್ತಿದ್ದರು. ಇದೀಗ ಕಾಂಗ್ರೆಸ್ ಮುಖ್ಯಮಂತ್ರಿಗಳ ನಿಜಬಣ್ಣ ಬಯಲು ಮಾಡಿದೆ ಎಂದರು.

ಧರಂಸಿಂಗ್ ಹಾಗೂ ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಗಣಿಗಾರಿಕೆಗೆ ಶಿಫಾರಸು ಮಾಡಿ ಅನುಮತಿ ಪಡೆಯಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಗಣಿಗಾರಿಕೆಗೆ ಸರಕಾರ ಶಿಫಾರಸು ಮಾಡುವುದು ತಪ್ಪು ಎಂದು ಹೇಳುತ್ತಿಲ್ಲ. ಆದರೆ ವಾಸ್ತವಾಂಶವನ್ನು ಜನರ ಮುಂದಿಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಅದಿರು ರಫ್ತು ನಿಷೇಧಿಸಲಾಗಿದೆ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಗೋವಾಕ್ಕೆ ಅತಿ ಹೆಚ್ಚು ಅದಿರು ಸಾಗಾಣೆಯಾಗಿದೆ. ಮುಖ್ಯಮಂತ್ರಿಗಳ ಅದಿರು ನಿಷೇಧ ಆದೇಶ ಕೇವಲ ಕಾಗದದ ಮೇಲಿದೆ. ಕಾರ್ಯರೂಪಕ್ಕೆ ಬಂದಿಲ್ಲ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ