ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು: ದೇಶಪಾಂಡೆ (Desh pandy | BJP | Kaduru | Sonia gandhi | Manmohan singh)
Bookmark and Share Feedback Print
 
ರಾಜ್ಯಕ್ಕೆ ಶಾಪವಾಗಿರುವ ಬಿಜೆಪಿ ವಿಮೋಚನೆಗಾಗಿ ಕಡೂರು, ಗುಲ್ಬರ್ಗ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಅರ್ಥ ವ್ಯವಸ್ಥೆ ಕುಸಿದಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ. ತಮ್ಮ 40 ವರ್ಷದ ಸಕ್ರಿಯ ರಾಜಕೀಯದಲ್ಲಿ ಇಷ್ಟೊಂದು ಭ್ರಷ್ಟ, ದುಷ್ಟ, ನೀಚ ಸರಕಾರವನ್ನು ನೋಡಿಲ್ಲ ಎಂದರು.

ಕೋಮುವಾದಿ ಬಿಜೆಪಿ ಸಂಘ ಪರಿವಾರ ಮೂಲಕ ಅಲ್ಪಸಂಖ್ಯಾತರ ಮೇಲೆ ಹಲ್ಲೆ ನಡೆಸುತ್ತಿದೆ. ಮಹತ್ವದ್ದಾಗಿರುವ ಈ ಚುನಾವಣೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎಂದು ಭವಿಷ್ಯ ನುಡಿದರು.

ಈ ಕ್ಷೇತ್ರದಲ್ಲಿ ಸೋನಿಯಾಗಾಂಧಿ ನಾಯಕತ್ವ, ಪ್ರಧಾನಿ ಮನಮೋಹನ್ ಸಿಂಗ್ ಅವರ ದಕ್ಷ ಆಡಳಿತ, ಕೃಷ್ಣಮೂರ್ತಿ ಅವರ ಸೇವೆ ಮುಂದಿಟ್ಟು ಮತ ಯಾಚಿಸುತ್ತಿದ್ದೇವೆ ಎಂದರು.

ವಚನ ಭ್ರಷ್ಟ ಬಿಜೆಪಿ ಪ್ರಣಾಳಿಕೆಯಲ್ಲಿಯ ಭರವಸೆ ಈಡೇರಿಸಿಲ್ಲ. ಎಲ್ಲ ವರ್ಗದ ಜನರಿಗೆ ಇದರಿಂದ ಅನ್ಯಾಯವಾಗಿದೆ. ಜನ ನೆಮ್ಮದಿ ಇಲ್ಲದಂತಾಗಿದೆ ಎಂದ ದೇಶಪಾಂಡೆ, ಜೆಡಿಎಸ್ ಬಣ್ಣವನ್ನು ಜನ ಇನ್ನೂ ಸರಿಯಾಗಿ ತಿಳಿದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜೆಡಿಎಸ್ ಕಾರಣ. ಮಾತಿನಂತೆ ಅಧಿಕಾರ ಬಿಟ್ಟುಕೊಟ್ಟಿದ್ದರೆ ಬಿಜೆಪಿ ಸರಕಾರವೇ ಬರುತ್ತಿರಲಿಲ್ಲ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ