ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪಚುನಾವಣೆಯಲ್ಲಿ ಗೆಲ್ಲಿಸಿದಲ್ಲಿ ಕ್ಷೇತ್ರಗಳ ಅಭಿವೃದ್ಧಿ:ಸಿಎಂ (Yudiyurappa | Byelection | Kadur | Gulbarga)
Bookmark and Share Feedback Print
 
PTI
ರಾಜ್ಯದಲ್ಲಿ ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಡೂರು ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಸಂಪೂರ್ಣ ಅಭಿವೃದ್ಧಿಯತ್ತ ಗಮನಹರಿಸಲಾಗುವುದು.ಪ್ರತಿ ತಿಂಗಳು ಪರಿಶೀಲನಾ ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಅಡಳಿತ ಪಕ್ಷದ ಸದಸ್ಯರಾಗಿರುವುದರಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.ಜನತೆ ಅಧಿಕಾರರೂಢ ಪಕ್ಷವನ್ನು ಆಯ್ಕೆ ಮಾಡುವತ್ತ ತಮ್ಮ ಗಮನಹರಿಸಬೇಕು ಎಂದು ಕರೆ ನೀಡಿದ್ದಾರೆ.

ಗುಲ್ಬರ್ಗಾ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಶಶೀಲ್ ನಮೋಶಿ ಆಯ್ಕೆಯಾಗುವ ನಿರೀಕ್ಷೆಗಳಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ