ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಆಡಳಿತಕ್ಕೆ ಅಡ್ಡಗಾಲು ಹಾಕಬೇಡಿ: ಭೈರಪ್ಪ ಉವಾಚ (BJP | Congress | Bharadwaj | S L Bhairappa | JDS,)
Bookmark and Share Feedback Print
 
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಆಡಳಿತದಿಂದ ಬೇಸತ್ತಿರುವ ರಾಜ್ಯದ ಜನತೆ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡಿ ಅಧಿಕಾರದ ಗದ್ದುಗೆ ನೀಡಿದ್ದಾರೆ. ಹಾಗಾಗಿ ಕಾಂಗ್ರೆಸ್, ಜೆಡಿಎಸ್ ಬಿಜೆಪಿಗೆ ಅಧಿಕಾರ ನಡೆಸಲು ಅಡ್ಡಗಾಲು ಹಾಕಬಾರದು ಎಂದು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಸಲಹೆ ನೀಡಿದ್ದಾರೆ.

ಸ್ವ ಗ್ರಾಮ ಸಂತೆ ಶಿವರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾವಶ್ಯಕವಾಗಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತ ಸರಕಾರವನ್ನು ಅಭದ್ರಗೊಳಿಸುವ ಕೆಲಸಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಮಾಡಬಾರದು ಎಂದರು.

ಅಲ್ಲದೇ ರಾಜ್ಯಪಾಲರ ಹುದ್ದೆ ಗೌರವಯುತವಾದದ್ದು, ಆದರೆ ಅವರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿನ ಬಿಜೆಪಿ ಸರಕಾರವನ್ನು ವಜಾಗೊಳಿಸಲು ರಾಜ್ಯಪಾಲರನ್ನು ನೇಮಕ ಮಾಡಿದಂತೆ ಗೋಚರಿಸುತ್ತಿದೆ ಎಂದು ಭೈರಪ್ಪ ಅಭಿಪ್ರಾಯವ್ಯಕ್ತಪಡಿಸಿದರು.

ಅಷ್ಟೇ ಅಲ್ಲ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಜಾರಿಯಾಗಬೇಕು. ವಿರೋಧ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿವೆ. ಈ ನೆಲೆಯಲ್ಲಿ ರಾಜ್ಯ ಸರಕಾರ ಗೋ ಹತ್ಯೆ ಕುರಿತಂತೆ ಕೈಗೊಂಡ ನಿರ್ಧಾರ ಸ್ವಾಗತಾರ್ಹವಾದದ್ದು. ರಾಜ್ಯಪಾಲರು ಇದಕ್ಕೆ ಅಂಕಿತ ಹಾಕಬೇಕು ಎಂದು ಒತ್ತಾಯಿಸಿದರು.

ಗಣಿ ಹಗರಣದ ಕುರಿತು ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿಯೂ ಗಣಿ ಹಗರಣವಾಗಿದೆ. ಸುಮ್ಮನೆ ಗಣಿ ವಿಚಾರವನ್ನೇ ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುವುದು ಕಾಂಗ್ರೆಸ್ ಪಕ್ಷದ ಸಂಘಟನೆಯ ಯತ್ನವಾಗಿದೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ