ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಲು ಸಿದ್ಧ: ಡಿಕೆಶಿ (DK Shivakumar | RV Deshpande | KPCC | BS Yedyurappa)
Bookmark and Share Feedback Print
 
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಲು ನಾನು ಸಂಪೂರ್ಣವಾಗಿ ಸಿದ್ಧನಿದ್ದೇನೆ, ವರಿಷ್ಠರು ಸಮ್ಮತಿಸಿದರೆ ನಾನು ಜವಾಬ್ದಾರಿ ಹೊತ್ತುಕೊಳ್ಳುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಪಕ್ಷದ ಮುಖಂಡರು ಮತ್ತು ವರಿಷ್ಠರು ಸಮ್ಮತಿ ಸೂಚಿಸಿದಲ್ಲಿ ನಾನು ಕಾಂಗ್ರೆಸ್ ರಾಜ್ಯಾಧ್ಯಕ್ಷನಾಗಲು ಸಿದ್ಧನಿದ್ದೇನೆ. ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿದೆ ಎಂದರು.

ಪ್ರಸಕ್ತ ಕೆಪಿಸಿಸಿ ಅಧ್ಯಕ್ಷರಾಗಿರುವ ಆರ್.ವಿ. ದೇಶಪಾಂಡೆಯವರು ನೆರೆ ಸಂತ್ರಸ್ತರ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಕಳಂಕ ಹೊತ್ತುಕೊಂಡಿದ್ದು, ಅವಧಿಯೂ ಮುಗಿದಿರುವುದರಿಂದ ಇನ್ನೇನು ತೆರವಾಗಲಿರುವ ಸ್ಥಾನಕ್ಕೆ ಹಲವರು ಪೈಪೋಟಿ ಆರಂಭಿಸಿದ್ದಾರೆ.

ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ, ಎಚ್.ಕೆ. ಪಾಟೀಲ್ ಸೇರಿದಂತೆ ಹಲವರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್‌ಗೆ ತಮ್ಮನ್ನೇ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ತಾನು ಕೂಡ ಸಿದ್ಧನಿದ್ದೇನೆ ಎಂದು ಶಿವಕುಮಾರ್ ದಾಳ ಎಸೆದಿದ್ದಾರೆ.

ದಾಖಲೆ ಇದ್ದರೆ ಪ್ರಧಾನಿಗೆ ನೀಡಲಿ...
ಗಣಿಗಾರಿಕೆ ಪರವಾನಗಿ ಬೇಕಿದ್ದರೆ ಕೇಂದ್ರದ ಸಚಿವರಿಗೆ ಲಂಚ ಕೊಟ್ಟರಾಯಿತು ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆರೋಪಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಶಿವಕುಮಾರ್, ಅವರ ಬಳಿ ಸಾಕ್ಷ್ಯಗಳಿದ್ದರೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಲಿ ಎಂದು ಸವಾಲು ಹಾಕಿದ್ದಾರೆ.

ವೃಥಾ ಸಾಕ್ಷ್ಯಗಳಿಲ್ಲದೆ ಆರೋಪ ಮಾಡುವುದರಲ್ಲಿ ಯಾವುದೇ ಪುರುಷಾರ್ಥವಿಲ್ಲ. ದಾಖಲೆಗಳಿದ್ದರೆ ಪ್ರಧಾನಿಗೆ ದೂರು ನೀಡಲಿ. ವಿನಾ ಕಾರಣ ಆರೋಪ ತರವಲ್ಲ. ಹಾಗಾಗಿ ಮುಖ್ಯಮಂತ್ರಿಯವರು ತಾನು ನೀಡಿರುವ ಹೇಳಿಕೆಗಾಗಿ ತಕ್ಷಣವೇ ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ