ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಚ್‌ಡಿಕೆ ತಂದೆಗೆ ತಕ್ಕ ಮಗ: ದೇವೇಗೌಡ ಬಹುಪರಾಕ್ (Kumaraswamy | Deve gowda | JDS | BJP | Yeddyurappa)
Bookmark and Share Feedback Print
 
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಂದೆಗೆ ತಕ್ಕ ಮಗನೇ ಆಗಿದ್ದಾರೆ. ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ಎದುರಿಸಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುತ್ರನಿಗೆ ಸಲಹೆ ನೀಡಿದ್ದಾರೆ.

ವಿರೋಧ ಪಕ್ಷಗಳ ಮುಖಂಡರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸುವ ಮುಖ್ಯಮಂತ್ರಿ ಯಡಿಯೂರಪ್ಪ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿ ಸರಕಾರ ಅತ್ಯಂತ ಭ್ರಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಬೆತ್ತಲಾಗುವ ಸಮಯ ದೂರವಿಲ್ಲ ಎಂದು ಭವಿಷ್ಯ ನುಡಿದರು.

ಜೆಡಿಎಸ್ ಅಭ್ಯರ್ಥಿ ಅರುಣಾ ಪಾಟೀಲ್ ಪರ ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಅವರು ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ಜತೆ ಯಾವುದೇ ಒಳಒಪ್ಪಂದ ಮಾಡಿಕೊಂಡಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ