ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಭಿವೃದ್ದಿ ಬಗ್ಗೆ ಚರ್ಚೆಗೆ ಬನ್ನಿ: ಸಿಎಂ, ಖರ್ಗೆಗೆ ಗೌಡರ ಆಹ್ವಾನ (Deve gowda | JDS | Mallikarjuana Kharghe | Congress)
Bookmark and Share Feedback Print
 
ಯಾರ ಅವಧಿಯಲ್ಲಿ ರಾಜ್ಯ ಎಷ್ಟು ಅಭಿವೃದ್ಧಿಯಾಗಿದೆ ಎನ್ನುವುದನ್ನು ಚರ್ಚೆ ಮಾಡಲು ಬಹಿರಂಗ ಚರ್ಚೆಗೆ ಬನ್ನಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ನೇರ ಸವಾಲು ಹಾಕಿದ್ದಾರೆ.

ಯಡಿಯೂರಪ್ಪ ತಮ್ಮ ಅವಧಿಯಲ್ಲಿ ಏನೇನು ಮಾಡಿದ್ದಾರೆ ಎಂದು ಹೇಳಲಿ. ಅದೇ ರೀತಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಸರಕಾರ ಇದ್ದಾಗ ಏನು ಮಾಡಿದ್ದಾರೆ ಎಂದು ತಿಳಿಸಲಿ. ನಾನು ಏನು ಮಾಡಿದ್ದೇನೆ ಎಂದು ಹೇಳುತ್ತೇನೆ. ಹಾಗಾಗಿ ಅವರೆಲ್ಲ ಬಹಿರಂಗ ಚರ್ಚೆಗೆ ಬರಲಿ ಎಂದು ಆಹ್ವಾನ ನೀಡಿದರು.

ಗುಲ್ಬರ್ಗಾ ದಕ್ಷಿಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅರುಣಾ ಪಾಟೀಲ್ ಅವರ ಪರ ಮತಯಾಚಿಸುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, ಸುಮ್ಮನೆ ಬಡಾಯಿ ಕೊಚ್ಚಿಕೊಳ್ಳುವ ಬದಲು, ಧೈರ್ಯವಿದ್ದರೆ ಚರ್ಚೆಗೆ ಬರಲಿ. ಯಾರು ಎಷ್ಟು ಕಡಿದು ಕಟ್ಟೆ ಹಾಕಿದ್ದಾರೆ ಎಂಬುದನ್ನು ಜನರ ಮುಂದಿಡೋಣ ಎಂದರು. ಚರ್ಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಧರಂಸಿಂಗ್, ಮಲ್ಲಿಕಾರ್ಜುನ ಖರ್ಗೆ ಬರಲಿ, ನಾನೂ ಬರುತ್ತೇನೆ ಎಂದು ಪಂಥಾಹ್ವಾನ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ