ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದಲ್ಲಿ ಎಚ್1ಎನ್1ಗೆ 104 ಜನ ಬಲಿ: ಶ್ರೀರಾಮುಲು (Sri ramulu | H1N1 | Hassan | Karnataka | Medical college)
Bookmark and Share Feedback Print
 
ಹಾಸನ, ಮೈಸೂರು ವೈದ್ಯಕೀಯ ಕಾಲೇಜುಗಳ ಬೋಧಕೇತರ ಸಿಬ್ಬಂದಿ ನೇಮಕದಲ್ಲಿ ಅನ್ಯಾಯಕ್ಕೊಳಗಾದವರಿಗೆ ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಕೃಪಾಂಕ ನೀಡುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಸಮಾಜದ ಮುಖಂಡರ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನೇಮಕ ಪ್ರಕ್ರಿಯೆಯಲ್ಲಿನ ನ್ಯೂನತೆಯಿಂದ ಆಕಾಂಕ್ಷಿಗಳು ಅಸಮಾಧಾನಗೊಂಡಿರುವುದು ಸತ್ಯ. ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಅವರಿಗೆ ನ್ಯಾಯ ದೊರಕಿಸಲಾಗುವುದು. ಕೃಪಾಂಕ ನೀಡುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯಲಾಗುವುದು. ವಂಚಿತರಿಗೆ ನ್ಯಾಯ ಒದಗಿಸಲು ಸರಕಾರ ಸರ್ವ ಪ್ರಯತ್ನ ಮಾಡಲಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಈ ಮಳೆಗಾಲ ಆರಂಭವಾದ ನಂತರ ರಾಜ್ಯದಲ್ಲಿ ಎಚ್1ಎನ್1 ವೈರಸ್‌ಗೆ 104 ಜನ ಬಲಿಯಾಗಿದ್ದಾರೆ. 1937 ಜನರಿಗೆ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಎಚ್1ಎನ್1, ಡೆಂಗ್ಯು, ಚಿಕೂನ್ ಗೂನ್ಯದಂಥ ಹೊಸ ಮಾರಕ ಕಾಯಿಲೆಗಳು ರಾಜ್ಯದಲ್ಲಿ ಮರುಕಳಿಸುತ್ತಿವೆ. ಹೊರ ದೇಶದಿಂದ ಬಂದವರ ತಪಾಸಣೆಯಲ್ಲಿನ ಲೋಪ ಇದಕ್ಕೆ ಕಾರಣವಿರಬಹುದು ಎಂದರು.

ಸರಕಾರಿ ಆಸ್ಪತ್ರೆಗಳಲ್ಲಿ ಇವುಗಳಿಗೆ ಸೂಕ್ತ ಔಷಧ ದಾಸ್ತಾನಿದೆ. ಇವುಗಳನ್ನು ಹೆಚ್ಚಿನ ದರಕ್ಕೆ ಮಾರುವ ಓಷಧ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬೆಂಗಳೂರಿನ ಶಿವಾಜಿ ನಗರ, ಗುಲ್ಬರ್ಗ ಹಾಗೂ ರಾಜ್ಯದ ಇತರೆಡೆ ಹಲವು ಔಷಧಿ ಅಂಗಡಿಗಳ ಮೇಲೆ ದಾಳಿ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವೈದ್ಯ ಶಿಕ್ಷಣ ದುಬಾರಿಯಾಗಿದೆ. ಈ ಕಾರಣಕ್ಕೆ ಕಡಿಮೆ ಸಂಬಳ ಹಾಗೂ ಗ್ರಾಮೀಣ ಸೇವೆ ಕಡ್ಡಾಯವಾಗಿರುವ ಸರಕಾರಿ ಉದ್ಯೋಗಕ್ಕೆ ವೈದ್ಯರು ಬರುತ್ತಿಲ್ಲ. ಇತ್ತೀಚೆಗೆ ವೈದ್ಯರ ಸಂಬಳ 8 ಸಾವಿರದಿಂದ 22 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಇನ್ನೂ ಹೆಚ್ಚಿನ ಸೌಲಭ್ಯ ನೀಡಿ ವೈದ್ಯರು ಹಾಗೂ ಇತರ ಸಿಬ್ಬಂದಿ ನೇಮಕಕ್ಕೆ ಇಲಾಖೆ ಆದ್ಯತೆ ನೀಡಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ