ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್, ಜೆಡಿಎಸ್‌ಗೆ ಜನ ಪಾಠ ಕಲಿಸ್ತಾರೆ: ಯಡಿಯೂರಪ್ಪ (Congress | JDS | Yeddyurappa | BJP | By election)
Bookmark and Share Feedback Print
 
ಗುಲ್ಬರ್ಗ ದಕ್ಷಿಣ ಮತ್ತು ಕಡೂರು ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಭಾರಿ ಮತಗಳ ಅಂತರದಿಂದ ಗೆಲ್ಲಲಿದೆ. ಬಿಜೆಪಿ ಪರವಾಗಿ ಮತದಾರ ಪ್ರಮಾಣ ಪತ್ರ ನೀಡಿ ಪ್ರತಿಪಕ್ಷಗಳಿಗೆ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುಲ್ಬರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಸಾಧನೆಗಳನ್ನು ಜನತೆ ಮೆಚ್ಚಿಕೊಂಡಿದ್ದಾರೆ. ಈ ಬಾರಿಯ ಉಪ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸುವ ಮೂಲಕ ಅದನ್ನು ಸಾಬೀತುಪಡಿಸಲಿದ್ದಾನೆ ಎಂದರು.

ಗುಲ್ಬರ್ಗ ಮಹಾನಗರ ಪಾಲಿಕೆಯಾಗಿದೆ. ಆದರೆ ಪಾಲಿಕೆ ಹೇಗಿರಬೇಕೋ ಆ ರೀತಿಯಿಲ್ಲ, ಇದನ್ನು ನಾನು ಮನಗಂಡಿದ್ದೇನೆ. ಅದಕ್ಕಾಗಿ 125 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ದಕ್ಷ ಮತ್ತು ಕೆಲಸದಲ್ಲಿ ಜವಾಬ್ದಾರಿ ತೋರುವ ಅಧಿಕಾರಿಗಳನ್ನು ನೇಮಿಸಿ ಅಭಿವೃದ್ದಿ ಮಾಡಿಸುತ್ತೇನೆ. ಮುಖ್ಯವಾಗಿ ನಗರವಾಸಿಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ದೀಪ, ಚರಂಡಿ ಹೀಗೆ ಮೂಲಭೂತ ಸೌಲಭ್ಯಗಳ ಕೊರತೆಯಾಗಬಾರದು ಅಂಥದೊಂದು ಕೆಲಸವನ್ನು ಬಿಜೆಪಿ ಸರಕಾರ ಮಾಡಲು ಹೊರಟಿದೆ ಎಂದರು.

ಈ ಬಾರಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಜನಾಂಗದವರು, ಅಲ್ಪಸಂಖ್ಯಾತರು ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ. ಅವರೆಲ್ಲ ಸೇರಿ ನಮೋಶಿಯವರನ್ನು ಗುಲ್ಬರ್ಗ ದಕ್ಷಿಣದಲ್ಲಿ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ