ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿದ್ದರಾಮಯ್ಯ-ಯಡಿಯೂರಪ್ಪ ಒಳ ಒಪ್ಪಂದ: ವರ್ತೂರ್ ಆರೋಪ (Siddaramaiah | Yeddyurappa | Prakash | BJP | Congress)
Bookmark and Share Feedback Print
 
ಗುಲ್ಬರ್ಗಾ ದಕ್ಷಿಣ ಹಾಗೂ ಕಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ಸಿದ್ದರಾಮಯ್ಯ ಬಲಗೈ ಬಂಟನಾಗಿದ್ದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಆರೋಪಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದರು. ಮಾತಿನುದ್ದಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಸರಕಾರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದ ನಂತರ ನಡೆದ ಮೊದಲ ಎಂಟು ವಿಧಾನಸಭೆಗಳ ಉಪ ಚುನಾವಣೆಗಳಲ್ಲಿಯೂ ಸಿಎಂ ಹಾಗೂ ಪ್ರತಿಪಕ್ಷದ ನಾಯಕ ಒಳ ಒಪ್ಪಂದ ಮಾಡಿಕೊಂಡಿದ್ದರ ಪರಿಣಾಮ 5 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 3 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ವಿಜಯಿಯಾಗಿದ್ದರು.

ನಂತರ ನಡೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿಯೂ ಈ ಒಳ ಒಪ್ಪಂದ ಕೆಲಸ ಮಾಡಿದ್ದರ ಪರಿಣಾಮ ಮೂರು ಸ್ಥಾನಗಳು ಬಿಜೆಪಿ ಪಾಲಾಗಿದ್ದವು. ಕಡೂರು ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನಿಗೆ ಟಿಕೆಟ್ ಲಭಿಸದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕುತಂತ್ರ ರೂಪಿಸಿದ್ದರು ಎಂದು ದೂರಿದರು.

ಕಡೂರು ವಿಧಾನಸಭಾ ಮತಕ್ಷೇತ್ರದಲ್ಲಿ 40-50 ಸಾವಿರ ಕುರುಬ ಜನಾಂಗದ ಮತಗಳಿವೆ. ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ಈ ವಿಧಾನಸಭಾ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿ ಮತದಾರರನ್ನು ಸೆಳೆಯಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ತಾವು ಸಹಾ ಶುಕ್ರವಾರದಿಂದ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಮುಕ್ಕಾಂ ಹೂಡಿ ಜೆಡಿಎಸ್ ಪರವಾಗಿ ಮತಯಾಚಿಸುತ್ತೇನೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ