ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದಾಖಲೆ ಇದ್ದರೆ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಿ: ಎಚ್‌ಡಿಕೆ (HDK | Kumaraswamy | Deve gowda | Yeddyurappa | Illigal mining)
Bookmark and Share Feedback Print
 
ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಿರುವ ಯಾವುದೇ ದಾಖಲೆಗಳು ಇದ್ದರೆ ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲೆಸೆದಿದ್ದಾರೆ.

ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ತಮ್ಮ ಕುಟುಂಬದ ವಿರುದ್ಧ ಹೇಳಿಕೆ ನೀಡುವ ಬದಲು ನೀವು ಕಾನೂನು ಕ್ರಮ ಕೈಗೊಳ್ಳಿ. ತಮ್ಮ ಪೂರ್ಣ ಸಹಕಾರವಿದೆ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡಬೇಡಿ ಎಂದು ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ಇಂತಹ ಹೇಳಿಕೆಗಳನ್ನು ನೀಡಿ ಜನರನ್ನು ನಂಬಿಸಲು ಸಾಧ್ಯವಿಲ್ಲ ಮುಖ್ಯಮಂತ್ರಿಗಳೇ ಎಂದು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರಕಾರದಲ್ಲಿ ತಾವು ಹಲವು ಕಾರ್ಯಕ್ರಮಗಳಿಗೆ ಸಹಕಾರ ನೀಡಲಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೆ ನೀಡುತ್ತಿದ್ದಾರೆ. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಲು ತಾವು ಮುಂದಾಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದು ನೀವೇ ಅಲ್ಲವೆ ಯಡಿಯೂರಪ್ಪನವರೇ ಎಂದು ತಿರುಗೇಟು ನೀಡಿದರು.

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ತಾವು ಬೆಂಬಲ ನೀಡಿದ್ದನ್ನು ನೀವು ಮರೆತಿದ್ದೀರಿ ಎಂದ ಅವರು, ತಾವು ಅಧಿಕಾರ ಹಸ್ತಾಂತರಿಸಲಿಲ್ಲ ಎಂದು ಆರೋಪ ಮಾಡುತ್ತಿದ್ದೀರಿ ಸರಿ. ಆದರೆ, ತಮ್ಮ ಕುಟುಂಬದವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಸಂಸದರಾಗಿ ಆರಿಸಿ ಹೋದ ನಂತರ ದೇವೇಗೌಡ ಕಡೂರಿಗೆ ಭೇಟಿ ನೀಡಿಲ್ಲ ಎಂದು ಆರೋಪ ಮಾಡುವ ನೀವು ಮಂಡಿಸಿದ್ದ ಬಜೆಟ್‌ನಲ್ಲಿ ಎಷ್ಟು ಅನುದಾನ, ಕಾರ್ಯಕ್ರಮಗಳನ್ನು ಕಡೂರಿಗೆ ನೀಡಿದ್ದೀರಿ? ದೇವೇಗೌಡರು ತಮ್ಮ ಸಂಸದರ ನಿಧಿಯಿಂದ 1.4 ಕೋಟಿ ಅನುದಾನವನ್ನು ಕಡೂರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದಾರೆ ಎಂಬುದು ನಿಮಗೆ ತಿಳಿದಿಲ್ಲವೆ ಎಂದು ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ