ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೆಂಗಳೂರು ಸ್ಫೋಟ: ಮದನಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್ (Bangalore blast | Madani | High court | CCB | PDP)
Bookmark and Share Feedback Print
 
ಬೆಂಗಳೂರು ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಮದನಿ ತನ್ನ ವಿರುದ್ಧ ದಾಖಲಾಗಿರುವ ಆರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ವಜಾ ಮಾಡಿದೆ.

2008ರ ಜುಲೈ 5ರ ಬೆಂಗಳೂರು ಸ್ಫೋಟ ಪ್ರಕರಣ ಕುರಿತು ತನ್ನ ವಿರುದ್ಧದ ಆರೋಪ ಪಟ್ಟಿ ರದ್ದುಪಡಿಸುವಂತೆ ಕೋರಿ ಮದನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸ್ಫೋಟ ಪ್ರಕರಣ ತನಿಖೆ ಪ್ರಗತಿಯಲ್ಲಿರುವಾಗ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಮದನಿ ಪರ ವಕೀಲರಿಗೆ ತಿಳಿಸಿ ಅರ್ಜಿಯನ್ನು ವಜಾ ಮಾಡಿದರು.

ಆ ನಿಟ್ಟಿನಲ್ಲಿ ಆರೋಪ ಪಟ್ಟಿ ರದ್ದು ಮಾಡಲು ನಿರಾಕರಿಸಿದ ಪೀಠ, ಸ್ಫೋಟದ ತನಿಖೆ ಮುಂದುವರಿಯುತ್ತಿದೆ. ಈ ಸಂದರ್ಭದಲ್ಲಿ ಆರೋಪ ಪಟ್ಟಿ ರದ್ದುಪಡಿಸಿ ಎಂದು ಹೇಳುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಅಭಿಪ್ರಾಯವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ