ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೀತಿ ಸಂಹಿತೆ: ಕೇಂದ್ರ ಸಚಿವ ಸಲ್ಮಾನ್ ವಿರುದ್ಧ ದೂರು (UPA | Salman Kurshid | BJP | Congress | BJP | Election Commission)
Bookmark and Share Feedback Print
 
ಕೇಂದ್ರದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಸಲ್ಮಾನ್ ಖುರ್ಷಿದ್ ಗುರುವಾರ ಗುಲ್ಬರ್ಗಾ ಉಪ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕೇಂದ್ರ ಸಚಿವ ಖುರ್ಷಿದ್ ನಿನ್ನೆ ಗುಲ್ಬರ್ಗಾದಲ್ಲಿ ಚುನಾವಣಾ ಪ್ರಚಾರ ವೇಳೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಮಾನ ಅವಕಾಶಗಳ ಆಯೋಗವನ್ನು ರಚಿಸುವುದಾಗಿ ಹೇಳಿದ್ದರು. ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಬಿಜೆಪಿ ದೂರಿನಲ್ಲಿ ತಿಳಿಸಿದೆ.

ಬಿಜೆಪಿ ಶಾಸಕ ವಿಜಯಕುಮಾರ್ ಮತ್ತು ಮಾಧ್ಯಮ ಉಸ್ತುವಾರಿ ನೋಡಿಕೊಳ್ಳುವ ಎಸ್.ಪ್ರಕಾಶ್ ಶುಕ್ರವಾರ ಕೇಂದ್ರ ಸಚಿವ ಖುರ್ಷಿದ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ವಿಜಯ ಕುಮಾರ್, ಕೇಂದ್ರ ಸಚಿವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ