ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪಚುನಾವಣೆ: ಕಡೂರು ಗರಿಷ್ಠ, ಗುಲ್ಬರ್ಗ (ದ) ಶೇ.55 (BJP | Congress | JDS | Kumaraswmy | Deve gowda | By election)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದ ಗುಲ್ಬರ್ಗಾ ದಕ್ಷಿಣ, ಕಡೂರು ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ನಡೆದ ಉಪ ಚುನಾವಣೆಯಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳ ಹೊರತಾಗಿ ಶಾಂತಿಯುತವಾಗಿ ಮತದಾನ ನಡೆಯಿತು.

ಜಿದ್ದಾಜಿದ್ದಿನ ಕಣವಾಗಿದ್ದ ಗುಲ್ಬರ್ಗ ದಕ್ಷಿಣ ಕ್ಷೇತ್ರದಲ್ಲಿ ಶೇ.55ರಷ್ಟು ಮತದಾನ ನಡೆದಿದ್ದು, ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.71ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಕಡೂರು ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಮತದಾನದ ಆರಂಭದಲ್ಲಿ ಮತಯಂತ್ರದ ದೋಷದಿಂದಾಗಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು. ನಂತರ ಅವುಗಳನ್ನು ಸರಿಪಡಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು.

ಲಕ್ಷ್ಮೀಪುರ ಮತಗಟ್ಟೆಯಲ್ಲಿ ಪೊಲೀಸರು ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ದೂರಿ ಜೆಡಿಎಸ್ ಅಭ್ಯರ್ಥಿ ದತ್ತ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಅಲ್ಲದೇ ಕ್ಯಾದಗೆ ಪುರದಲ್ಲಿ ಬಿಜೆಪಿ ಜಾತಿ ಆಧಾರದಲ್ಲಿ ಹಣ ಹಂಚಿಕೆ ಮಾಡುವ ಮೂಲಕ ಗ್ರಾಮಸ್ಥರಲ್ಲಿ ಒಡಕು ಮೂಡಿಸಿದ್ದಾರೆಂದು ದೂರಿ ಮತದಾನ ಬಹಿಷ್ಕರಿಸಿದರು. ನಂತರ ಚುನಾವಣಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಮನವೊಲಿಸಿದ ನಂತರ ಗ್ರಾಮಸ್ಥರು ಮತ ಚಲಾಯಿಸಿದರು.

ಗುಲ್ಬರ್ಗ ನಗರದ ನ್ಯೂ ರಾಘುವೇಂದ್ರ ಕಾಲೋನಿಯ ವ್ಯಾಪ್ತಿಯಲ್ಲಿ ಕಾರಿನಲ್ಲಿ ಐದು ಲಕ್ಷ ರೂಪಾಯಿ ಪೊಲೀಸರು ವಶಪಡಿಸಿಕೊಂಡು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಹಣ ಯಾವ ಪಕ್ಷಕ್ಕೆ ಸೇರಿದ್ದು ಎಂಬ ಮಾಹಿತಿ ತಿಳಿದು ಬಂದಿಲ್ಲ.

ಗುಲ್ಬರ್ಗ ದಕ್ಷಿಣ ಮತ್ತು ಕಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಸೆಪ್ಟೆಂಬರ್ 16ರಂದು ನಡೆಯಲಿದ್ದು, ಅಂದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಲಭ್ಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ