ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಡೂರು ಸೋಲಿನ ಹೊಣೆ; ಸಿದ್ದರಾಮಯ್ಯ ರಾಜೀನಾಮೆ (Siddaramaiah | BJP | Congress | Vidhana sabhe | kaduru)
Bookmark and Share Feedback Print
 
NRB
ಕಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಫ್ಯಾಕ್ಸ್ ಮೂಲಕ ಪಕ್ಷದ ವರಿಷ್ಠೆ ಸೋನಿಯಾಗಾಂಧಿ ಅವರಿಗೆ ರವಾನಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಕಡೂರು ಕ್ಷೇತ್ರದ ಉಸ್ತುವಾರಿ ವಹಿಸಿದ್ದ ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಗುರುವಾರ ಫಲಿತಾಂಶ ಹೊರಬಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿನ ಫಲಿತಾಂಶ ಇಂದು ಹೊರಬಿದ್ದಿದ್ದು, ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿತ್ತು.

ಕಾಂಗ್ರೆಸ್ ಮುಖಂಡರಲ್ಲಿನ ಅಸಮಾಧಾನದಿಂದಾಗಿಯೇ ಪಕ್ಷದ ಗೆಲುವಿಗೆ ಅಡ್ಡಿ ಉಂಟಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭಾರೀ ಸವಾಲನ್ನು ಎದುರಿಸಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಡೂರು ಬಿಜೆಪಿಗೆ, ಗುಲ್ಬರ್ಗಾ ದಕ್ಷಿಣ ಜೆಡಿಎಸ್‌ಗೆ-ಕಾಂಗ್ರೆಸ್‌ಗೆ ಮುಖಭಂಗ
ಸಂಬಂಧಿತ ಮಾಹಿತಿ ಹುಡುಕಿ