ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪುಟ್ಟರಾಜ ಕವಿ ಗವಾಯಿಗಳ ಕೃತಿ ಮರು ಮುದ್ರಣ: ಮನು ಬಳಿಗಾರ (Puttaraj gavayi | Manu Baligar | Gadag | Veereshwar swamy | Karnataka)
Bookmark and Share Feedback Print
 
ಡಾ.ಪಂಡಿತ ಪುಟ್ಟರಾಜ ಗವಾಯಿಗಳು ರಚಿಸಿದ ಕೃತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮರು ಮುದ್ರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ ತಿಳಿಸಿದ್ದಾರೆ.

ಅವರು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಡಾ.ಪಂ.ಪುಟ್ಟರಾಜ ಕವಿ ಗವಾಯಿಗಳ ದರ್ಶನ ಪಡೆದ ನಂತರ ಸುದ್ದಿಗಾರರ ಜತೆ ಮಾತನಾಡಿ, ಶ್ರೀಗಳ ಆರೋಗ್ಯ ಪರಿಸ್ಥಿತಿ ಈಗ ಸುಧಾರಿಸುತ್ತಿದ್ದು, ಲಕ್ಷಾಂತರ ಭಕ್ತರ ಪ್ರಾರ್ಥನೆ ಫಲ ನೀಡುತ್ತಿದೆ. ಅಂತಹ ಭಕ್ತರಲ್ಲಿ ನಾನೂ ಒಬ್ಬನಾಗಿದ್ದೇನೆ. ಜನಸೇವೆಯೇ ಜನಾರ್ದನ ಸೇವೆ ಎಂದು ಸಮಾಜಕ್ಕೆ ಸೇವೆ ಸಲ್ಲಿಸಿದ ಶ್ರೀಗಳು ಜೀವಂತ ದೇವರಾಗಿದ್ದಾರೆಂಬುದು ಈಗ ಇಲ್ಲಿ ಪ್ರತ್ಯಕ್ಷ ಕಂಡು ಬರುತ್ತಿದೆ ಎಂದರು.

ಇಲಾಖೆಯಿಂದ ಅವರ ಕೃತಿಗಳನ್ನು, ಅದರಲ್ಲೂ ಮುಖ್ಯವಾಗಿ ಸಂಗೀತಕ್ಕೆ ಸಂಬಂಧಿಸಿದ ಅಪರೂಪದ ಕೃತಿಗಳನ್ನು ಮುದ್ರಿಸಬೇಕೆಂಬುದು ಭಕ್ತರ ಬೇಡಿಕೆಯಾಗಿದೆ. ಕರ್ನಾಟಕ ಸಂಗೀತ-ನೃತ್ಯ ಅಕಾಡಮಿ ಅಧ್ಯಕ್ಷ ನರಸಿಂಹಲು ವಡವಾಟಿ ಅವರ ಜತೆ ಚರ್ಚಿಸಿ ಅವುಗಳಲ್ಲಿ ಅತ್ಯಂತ ಉಪಯುಕ್ತವಾದ ಅಮೂಲ್ಯ ಕೃತಿಗಳನ್ನು ಮರು ಮುದ್ರಣ ಮಾಡಲಾಗುವುದು. ಇಲಾಖೆಯಿಂದ ಶ್ರೀ ವೀರೇಶ್ವರ ಪುಣ್ಯಾಶ್ರಮಕ್ಕೆ ನೀಡಿದ ಅನುದಾನದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ರಾಜ್ಯದ 68 ಕಲಾವಿದರು ಭಾಗವಹಿಸಲಿದ್ದಾರೆ. ಅವರಲ್ಲಿ ಸಂಗೀತ, ಜನಪದ ಕಲಾವಿದರೂ ಇರುತ್ತಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ