ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆಪಿಸಿಸಿ ಅಧ್ಯಕ್ಷಗಾದಿ ಆಕಾಂಕ್ಷಿ ನಾನಲ್ಲ: ಶಿವಕುಮಾರ್ (KPCC | Shiv kumar | Congress | Siddaramaiah | By election)
Bookmark and Share Feedback Print
 
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆಗೆ ತಾನು ಆಕಾಂಕ್ಷಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಪುನರುಚ್ಚಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದರು.ಕಾಂಗ್ರೆಸ್ ಪಕ್ಷ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲು ಅನುಭವಿಸುವಲ್ಲಿ ಮುಖಂಡರೇ ಕಾರಣ ಎಂದು ಒಪ್ಪಿಕೊಂಡ ಅವರು, ಇತ್ತೀಚಿಗಷ್ಟೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಸಂಬಂಧಿಸಿದಂತೆ ಹಿರಿಯ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಉಪ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಪ್ರತಿಪಕ್ಷದ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿರುವ ರಾಜೀನಾಮೆಯನ್ನು ತಿರಸ್ಕರಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದೇನೆ. ಸಿದ್ದರಾಮಯ್ಯನವರ ಈ ಕ್ರಮ ತಮಗೆ ಬೇಸರ ತರಿಸಿದೆ ಎಂದು ಶಿವಕುಮಾರ ತಿಳಿಸಿದರು.

ಕಾಂಗ್ರೆಸ್ ಪಕ್ಷ ಕೈಗೊಂಡ ಬಳ್ಳಾರಿ ಪಾದಯಾತ್ರೆಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಪಾದಯಾತ್ರೆ ಕೈಗೊಂಡಿದ್ದು ಅಕ್ರಮ ಗಣಿಗಾರಿಕೆ ತಡೆಯಲು ಹೊರತು ಚುನಾವಣೆಗೆ ಸಂಬಂಧವಿಲ್ಲ ಎಂದರು.

ಆದರೂ ಪಕ್ಷ ಇತ್ತೀಚಿನ ಚುನಾವಣೆಯಲ್ಲಿ ಸೋಲುತ್ತಿರುವುದು ಪಕ್ಷದ ದುಸ್ಥಿತಿಯ ಸೂಚಕವಾಗಿದೆ ಎಂದು ಒಪ್ಪಿಕೊಂಡ ಡಿಕೆಶಿ, ಮುಂಬರುವ ದಿನಗಳಲ್ಲಿ ಪಕ್ಷವನ್ನು ಸಂಘಟಿಸಲು ಯಾವ ರೀತಿಯ ತಂತ್ರಗಾರಿಕೆ ರೂಪಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ