ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸೆ.22ಕ್ಕೆ ಸಂಪುಟ ಪುನಾರಚನೆ: ಆತ್ಮಹತ್ಯೆ, ರಾಜೀನಾಮೆ ಬೆದರಿಕೆ! (Nithin gadkari | Yeddyurappa | Dhanajaya kumar | Ananth kumar)
Bookmark and Share Feedback Print
 
ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆ ಬೆದರಿಕೆ, 20 ಶಾಸಕರ ರಾಜೀನಾಮೆ ಕೊಡಿಸುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆಯ ನಡುವೆಯೂ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಇಂದು ಪಕ್ಷದ ವರಿಷ್ಠರ ಜತೆ ಚರ್ಚೆ ಮಾಡಿದ ನಂತರ ಹೈಕಮಾಂಡ್‌ನಿಂದ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ ಎಂದು ನವದೆಹಲಿಯ ವಿಶೇಷ ಪ್ರತಿನಿಧಿ ವಿ.ಧನಂಜಯ್ ಕುಮಾರ್ ಖಚಿತಪಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ನವದೆಹಲಿಯಲ್ಲಿ ಸಾಕಷ್ಟು ಕಸರತ್ತು ನಡೆಸುವ ಮೂಲಕ ಹೈಕಮಾಂಡ್ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ಆಡಳಿತಾರೂಢ ಪಕ್ಷದ ಬಿಜೆಪಿ ಪಕ್ಷೇತರ ಸಚಿವರು, ಸಚಿವಗಿರಿ ಆಕಾಂಕ್ಷೆಯ ಶಾಸಕರಲ್ಲಿ ಅಸಮಾಧಾನ ಸ್ಫೋಟಗೊಂಡಿರುವುದು ಸರಕಾರಕ್ಕೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಸಂಸದ ಅನಂತ್ ಕುಮಾರ್ ಅವರ ಗೈರು ಹಾಜರಿಯಲ್ಲಿ ನಡೆದಿರುವ ಸಭೆ ಅಪೂರ್ಣ ಎಂಬ ಮಾತು ರಾಜ್ಯರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಆದರೂ ಇಂದು ರಾತ್ರಿ ನವದೆಹಲಿಯಲ್ಲಿ ಕೋರ್ ಕಮಿಟಿ ಸಮಿತಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಅನಂತ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಸಮಾಧಾನ ಇದ್ರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ-ಧನಂಜಯ್: ಯಾವುದೇ ಶಾಸಕರು, ಸಚಿವರಿಗೆ ಅಸಮಾಧಾನ ಇದ್ದರೆ ಅದನ್ನು ಬಹಿರಂಗವಾಗಿ ವ್ಯಕ್ತಪಡಿಸುವುದು ಪಕ್ಷದ ಶಿಸ್ತನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಬಿಜೆಪಿ ಮುಖಂಡ ಧನಂಜಯ್ ಕುಮಾರ್ ಭಿನ್ನಮತೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಏನೇ ಅಸಮಾಧಾನ ಇದ್ದರೂ ಕೂಡ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ. ಉತ್ತಮ ಆಡಳಿತ ನೀಡಬೇಕೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಂಪುಟ ಪುನಾರಚನೆ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ನಿರ್ಧಾರವನ್ನು ಪಕ್ಷದ ಎಲ್ಲಾ ಶಾಸಕರು, ಸಚಿವರು ಗೌರವಿಸಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಜೀನಾಮೆ ಕೇಳಿದ್ರೆ ಆತ್ಮಹತ್ಯೆ ಮಾಡಿಕೊಳ್ತೇನೆ:ಗೂಳಿಹಟ್ಟಿ

20 ಶಾಸಕರ ರಾಜೀನಾಮೆ-ಬೇಳೂರು ಬ್ಲ್ಯಾಕ್‌ಮೇಲ
ಸಂಬಂಧಿತ ಮಾಹಿತಿ ಹುಡುಕಿ