ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭುಗಿಲೆದ್ದ ಭಿನ್ನಮತ: ಶಾಸಕ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ (CT Ravi | BJP | Yeddyurappa | Ishawarappa | Karnataka | Cabinet)
Bookmark and Share Feedback Print
 
NRB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಮಂತ್ರಿಗಿರಿ ಆಕಾಂಕ್ಷಿ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿ ಭಿನ್ನಮತ ಸ್ಫೋಟಗೊಂಡಂತಾಗಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಸಲ್ಲಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಕುರಿತಂತೆ ಮಂತ್ರಿಗಿರಿಯ ಮೇಲೆ ಕಣ್ಣಿಟ್ಟಿದ್ದ ಸಿ.ಟಿ.ರವಿ ಅವರು ಇಂದು ಬೆಳಿಗ್ಗೆ ಈಶ್ವರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಆದರೆ ಚರ್ಚೆಯ ವೇಳೆ ಮಂತ್ರಿಸ್ಥಾನದ ಬಗ್ಗೆ ಸಮರ್ಪಕ ಆಶ್ವಾಸನೆ ದೊರೆಯದ ನಿಟ್ಟಿನಲ್ಲಿ ರವಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿನ ಬಿಕ್ಕಟ್ಟು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.

ಈಗಾಗಲೇ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ಶಂಕರಲಿಂಗೇಗೌಡ, ಎಸ್.ಕೆ.ಬೆಳ್ಳುಬ್ಬಿ, ಜೀವರಾಜ್ ಸೇರಿದಂತೆ ಹಲವರು ವಿವಿಧ ತಂತ್ರಗಾರಿಕೆಯ ಮೂಲಕ ಪಕ್ಷದ ವರಿಷ್ಠರಿಗೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.
ಅಷ್ಟೇ ಅಲ್ಲ ತನ್ನ ರಾಜೀನಾಮೆ ಕೇಳಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್ ಎಚ್ಚರಿಕೆಯನ್ನೂ ನೀಡಿದ್ದಾರೆ. ಗ್ರಂಥಾಲಯ ಸಚಿವ ಶಿವನಗೌಡ ನಾಯಕ್ ಅವರನ್ನೂ ಕೂಡ ಸಚಿವ ಸಂಪುಟದಿಂದ ಕೈಬಿಡುತ್ತಾರೆಂಬ ಗಾಳಿಸುದ್ದಿಯ ಹಿನ್ನೆಲೆಯಲ್ಲಿ ಗೌಡ ಕೂಡ ರಾಜೀನಾಮೆ ನೀಡುವ ಬೆದರಿಕೆ ಒಡ್ಡುವ ಮೂಲಕ ಬಿಜೆಪಿಯಲ್ಲಿನ ಅತೃಪ್ತರ ಅಸಮಾಧಾನ ಭುಗಿಲೆದ್ದಂತಾಗಿದೆ.

ಸಚಿವ ಸಂಪುಟ ಪುನಾರಚನೆಗೆ ಪಕ್ಷದ ಹೈಕಮಾಂಡ್ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಕೈಬಿಡಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಒಟ್ಟಾರೆ ಯಾರಿಗೆ ಸಚಿವ ಪಟ್ಟ ನೀಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ