ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಕ್ಕಟ್ಟು ಅಂತ್ಯ?:ಯಾರೂ ರಾಜೀನಾಮೆ ನೀಡಿಲ್ಲ: ಈಶ್ವರಪ್ಪ (Ishwarappa | Yeddyurappa | Cabinet | BJP | Reddy)
Bookmark and Share Feedback Print
 
ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಯಾವುದೇ ಬಿಕ್ಕಟ್ಟಿಲ್ಲ. ಸ್ವಾಭಾವಿಕವಾಗಿ ಅತೃಪ್ತರು ಅವರ ಭಾವನೆಗಳನ್ನು ಹೊರಹಾಕಿದ್ದಾರೆ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಯಾವ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮಂಗಳವಾರ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಉಂಟಾದ ಭಿನ್ನಮತದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ತಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದರು. ಆದರೆ ಮಂತ್ರಿಗಿರಿ ಆಕಾಂಕ್ಷಿಯಾಗಿರುವ ಶಾಸಕ ಸಿ.ಟಿ.ರವಿ ಅವರು ಈಶ್ವರಪ್ಪ ಅವರ ಜತೆಗಿನ ಚರ್ಚೆಯ ಸಂದರ್ಭದಲ್ಲಿ ಸಮಾಧಾನಕರ ಉತ್ತರ ದೊರೆಯದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗಿತ್ತು.

ಏತನ್ಮಧ್ಯೆ ಪಕ್ಷದ ಎಲ್ಲಾ ಶಾಸಕರು ನಮ್ಮ ಜೊತೆಗಿದ್ದಾರೆ. ಯಾರೂ ಅಸಮಾಧಾನದಿಂದ ರಾಜೀನಾಮೆ ನೀಡಿಲ್ಲ. ನೂತನ ಸಚಿವರ ಸೇರ್ಪಡೆ ಬಗ್ಗೆ ಇಂದು ಸಂಜೆಯೊಳಗೆ ಅಧಿಕೃತವಾಗಿ ಪ್ರಕಟಿಸುವುದಾಗಿ ಅವರು ಹೇಳಿದರು.

ಸಂಪುಟಕ್ಕೆ ಆರು ಮಂದಿ ಸೇರ್ಪಡೆ:ಸಚಿವ ಸಂಪುಟದಲ್ಲಿ ಮೂರು ಸಚಿವ ಸ್ಥಾನ ಖಾಲಿ ಇದೆ. ಅದೇ ರೀತಿ ಹಾಲಿ ಇರುವ ಮೂರು ಸಚಿವರಿಂದ ರಾಜೀನಾಮೆ ಪಡೆಯಲಾಗುವುದು. ಆ ನಿಟ್ಟಿನಲ್ಲಿ ಒಟ್ಟು ಆರು ಮಂದಿ ನೂತನ ಸಚಿವರನ್ನು ಸಂಪುಟಕ್ಕೆ ಆಯ್ಕೆ ಮಾಡಲಾಗುವುದು ಎಂದು ಈಶ್ವರಪ್ಪ ಖಚಿತಪಡಿಸಿದ್ದಾರೆ.

ಸಂಜೆಯೊಳಗೆ ನೂತನ ಸಚಿವರ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಸಂಪುಟ ಪುನಾರಚನೆ ಸಂಬಂಧ ಉಂಟಾದ ಗೊಂದಲ ಬಗೆಹರಿಯುವ ವಿಶ್ವಾಸ ಇದೆ ಎಂದರು.

ನಾಳೆ ಪ್ರಮಾಣವಚನ ಸ್ವೀಕಾರ: ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಯಾವುದೇ ಶಾಸಕರು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಸ್ಪಷ್ಟನೆ ನೀಡಿದ್ದಾರೆ. ನಾಳೆ ಬೆಳಿಗ್ಗೆ 9.30ಕ್ಕೆ ರಾಜಭವನದಲ್ಲಿ ಆರು ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀರಾಮುಲು ನಿವಾಸದಲ್ಲಿ ಸಭೆ: ಕಂದಾಯ ಸಚಿವ ಕರುಣಾಕರ ರೆಡ್ಡಿ, ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಅವರ ನೇತೃತ್ವದಲ್ಲಿ ಸಚಿವ ಶ್ರೀರಾಮುಲು ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಚಿವ ಶಿವನಗೌಡ ನಾಯಕ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದು, ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಗೂಳಿಹಟ್ಟಿ ಬೆಂಬಲಿಗರಿಂದ ಆತ್ಮಹತ್ಯೆಗೆ ಯತ್ನ: ಕ್ರೀಡಾ ಸಚಿವ ಗೂಳಿಹಟ್ಟಿ ಶೇಖರ್ ಅವರ ಮೂರು ಬೆಂಬಲಿಗರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಸಚಿವ ಸಂಪುಟದಿಂದ ಗೂಳಿಹಟ್ಟಿ ಅವರನ್ನು ಸಂಪುಟದಿಂದ ಕೈಬಿಡುತ್ತಿದ್ದಾರೆ ಎಂಬ ಊಹಾಪೋಹದ ಹಿನ್ನೆಲೆಯಲ್ಲಿ ಬೆಂಬಲಿಗರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹನುಮಂತು, ಅನಂತು, ಗಿರೀಶ್ ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ
ಸಂಬಂಧಿತ ಮಾಹಿತಿ ಹುಡುಕಿ