ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗ್ರಂಥಾಲಯ ಮೇಲ್ಚಿಚಾರಕರ ಗೌರವಧನ ಹೆಚ್ಚಳ: ರಾಘವೇಂದ್ರ (Raghavendra | BJP | Yeddyurappa | Shimoga | Congress)
Bookmark and Share Feedback Print
 
ಗ್ರಾಮೀಣ ಗ್ರಂಥಾಲಯಗಳ ಮೇಲ್ವಿಚಾರಕರ ಗೌರವ ಧನವನ್ನು ಆಗಸ್ಟ್‌ನಿಂದ ಪೂರ್ವಾನ್ವಯವಾಗುವಂತೆ ಹೆಚ್ಚಳ ಮಾಡಿ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಕರ್ನಾಟಕ ಸಂಘ ಭವನದಲ್ಲಿ ರಾಜ್ಯ ಸರಕಾರಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಸಂಘದ ಅಭಿನಂದನಾ ಸಮಾರಂಭದಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಗ್ರಾಮೀಣ ಗ್ರಂಥಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮೇಲ್ವಿಚಾರಕರ ಸಮಸ್ಯೆಗಳ ಅರಿವು ತಮಗಿದೆ. ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಲಾಗುವುದು. ಈ ಹಿಂದೆ ಗ್ರಂಥಾಲಯ ಮೇಲ್ವಿಚಾರಕರಿಗೆ ನೀಡಲಾಗುತ್ತಿದ್ದ ಗೌರವಧನವನ್ನು 1,500 ರೂ.ನಿಂದ 2,500 ರೂ.ಗೆ ಹೆಚ್ಚಿಸಲು ಚರ್ಚಿಸಲಾಗಿತ್ತು. ಈ ಬೇಡಿಕೆಗೆ ಸರಕಾರ ಪೂರಕವಾಗಿ ಸ್ಪಂದಿಸಿದೆ ಎಂದರು.

ಗ್ರಾಮೀಣ ಗ್ರಂಥಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರ ಸೇವೆ ಸ್ಮರಣೀಯ. ಗ್ರಂಥಾಲಯ ಮೇಲ್ವಿಚಾರಕರು ಸೇವೆಯಿಂದ ವಿಮುಖರಾಗದೆ ಪ್ರಾಮಾಣಿಕವಾಗಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸಬೇಕೆಂದರು.

ಗ್ರಂಥಾಲಯ ಮೇಲ್ವಿಚಾರಕರಿಗೆ ಗ್ರಾಮ ಪಂಚಾಯಿತಿಯಿಂದ ನೀಡಲಾಗುತ್ತಿದ್ದ ಗೌರವ ಧನವನ್ನು ಈಗ ಇಲಾಖೆ ವತಿಯಿಂದ ನೀಡಲಾಗುತ್ತಿದೆ. ಪರಿಷ್ಕೃತ ವೇತನದಿಂದ ಸರಕಾರಕ್ಕೆ ವಾರ್ಷಿಕ ಸುಮಾರು 70 ಕೋಟಿ ರೂ. ಹೊರೆ ಬೀಳಲಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ