ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಮನೆ ಮುಂದೆ ಪ್ರತಿಭಟನೆ ಅನಿವಾರ್ಯ: ರೇವಣ್ಣ (BJP | Yeddyurappa | Revanna | Hassan | JDS | Kumaraswamy)
Bookmark and Share Feedback Print
 
ಜಿಲ್ಲೆಯ ಬೇಡಿಕೆಗಳ ಬಗ್ಗೆ ಸರಕಾರ ಯಾವುದೇ ರೀತಿ ಸ್ಪಂದಿಸದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಮುಂದೆ ಪ್ರತಿಭಟನೆ ಅನಿವಾರ್ಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸೆ.23ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಶಾಸಕರು, ಜಿ.ಪಂ. ಮತ್ತು ತಾ.ಪಂ. ಜನಪ್ರತಿನಿಧಿಗಳು ಮಾತ್ರ ಭಾಗವಹಿಸಲಿದ್ದಾರೆ ಎಂದರು.

ನೆನೆಗುದಿಗೆ ಬಿದ್ದಿರುವ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜತೆ ಚರ್ಚೆ ನಡೆಸಿಲ್ಲ. ಸರಕಾರವೂ ಈ ತನಕ ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಸಿಎಂ ಮನೆ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಜಿಲ್ಲೆಯ ಕಾಂಗ್ರೆಸ್‌ಗೆ ಮನವಿ ಮಾಡಲಾಗುವುದು. ಈ ಬಗ್ಗೆ ಇಬ್ಬರೂ ಶಾಸಕರ ಜತೆಯಲ್ಲಿ ತಾವು ಖುದ್ದು ಮಾತನಾಡುವುದಾಗಿ ತಿಳಿಸಿದರು.

ಆಲೂಗಡ್ಡೆಗೆ ಅಂಗಮಾರಿ ರೋಗ ಬಂದಿದ್ದರಿಂದ ರೈತರಿಗೆ 400 ಕೋಟಿ ರೂ. ನಷ್ಟವಾಗಿದೆ. ಕಳೆದ ವರ್ಷವೂ ಆಲೂ ಬೆಳೆ ಕೈ ಹಿಡಿಯಲಿಲ್ಲ. ಈ ಬಾರಿಯೂ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸಿಎಂ ಈ ಬಗ್ಗೆ ಪ್ರಧಾನಿ ಬಳಿಗೆ ನಿಯೋಗ ಒಯ್ಯಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಎಂಜಿನಿಯರಿಂಗ್ ಕಾಲೇಜು, ಪಶು ವೈದ್ಯ ಕಾಲೇಜು, ವೈದ್ಯ ಕಾಲೇಜು ಕಾಮಗಾರಿಗಳಿಗೆ ಬಾಕಿ ಹಣ ನೀಡಿಲ್ಲ. ಕುಮಾರಸ್ವಾಮಿ ಸರಕಾರದ ಅವಧಿಯಲ್ಲಿ ಪ್ರಾರಂಭಿಸಿದ ಎಲ್ಲ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಈ ಬಗ್ಗೆ ಸರಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ