ಬೆಂಗಳೂರು, ಗುರುವಾರ, 23 ಸೆಪ್ಟೆಂಬರ್ 2010( 12:50 IST )
ಅಯೋಧ್ಯೆ ವಿವಾದಿತ ಸ್ಥಳದ ವಿಷಯವಾಗಿ ಅಲಹಾಬಾದ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಇದರಂಗವಾಗಿ ಸೆಪ್ಟೆಂಬರ್ 24ರಂದು ಬೆಳಗ್ಗೆ 6 ಗಂಟೆಯಿಂದ 26ರ ಮಧ್ಯರಾತ್ರಿಯ ವರೆಗೂ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಈ ಆದೇಶವನ್ನು ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಭಾನುವಾರ ಮಧ್ಯ ರಾತ್ರಿಯ ವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಯಾವುದೇ ಪತ್ರಿಭಟನೆ, ಸಭೆ, ಮೆರವಣಿಗೆಗಳಿಗೆ ಅನುವು ಮಾಡಿಕೊಡುವುದಿಲ್ಲ. ಅಲ್ಲದೆ ನಗರದ್ಯಾದಂತ ತೀವ್ರ ನಿಗಾ ವಹಿಸಲಾಗುವುದು ಎಂದವರು ತಿಳಿಸಿದರು.
ಮದ್ಯಕ್ಕೂ ಬ್ರೇಕ್, ಶಾಲಾ ಕಾಲೇಜುಗಳಿಗೆ ರಜೆ... ಇದರಂತೆ ನಗರದಲ್ಲಿ ಶುಕ್ರವಾರ ಮತ್ತು ಶನಿವಾರದ ಮದ್ಯ ಮಾರಾಟಗಳಿಗೂ ಕತ್ತರಿ ಹಾಕಲಾಗಿದೆ. ಅಲ್ಲದೆ ಕೋಮು ಸೌಹಾರ್ದತೆ ಕಾಪಾಡುವಂತೆಯೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಕರೆ ನೀಡಿದ್ದು, ಶುಕ್ರವಾರ ಮತ್ತು ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದೂಡಿಕೆ ಅರ್ಜಿ ವಜಾ... ಮತ್ತೊಂದೆಡೆ ಅಯೋಧ್ಯೆ ವಿವಾದತ್ಮಾಕ ತೀರ್ಪನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲಬಾಬಾದ್ ನ್ಯಾಯಾಲದ ಅಂತಿಮ ತೀರ್ಪಿನ ಕ್ಷಣದಲ್ಲಿ ಮಧ್ಯೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಂಗ ಪೀಠ ಸ್ಪಷ್ಟಪಡಿಸಿದೆ.