ನಗರದಲ್ಲಿ ಶುಕ್ರವಾರ ರಾತ್ರಿಯಿಂದ ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಪೂರ್ಣವಾಗಿ ಅಸ್ತವಸ್ತವಾಗಿತ್ತು.
ರಸ್ತೆಯಲ್ಲೇ ನೀರು ನಿಂತಿದ್ದರಿಂದ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿತ್ತು. ಇದರಿಂದಾಗಿ ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯುವಂತ ಪರಿಸ್ಥಿತಿ ಬಂದೊದಗಿತ್ತು. ಅನೇಕ ಕಡೆಗಳಲ್ಲಿ ಮರಗಳು ಧರೆಗುರಿಳಿದ್ದು, ಚರಂಡಿ ನೀರುಗಳು ಮನೆಯೊಳಗೆ ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸುವಂತಾಗಿತ್ತು.
ಮೆಜೆಸ್ಟಿಕ್‌ನ ಅಣ್ಣಮ್ಮ ದೇವಾಲಯ ಮತ್ತು ಮೈಸೂರು ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನಕ್ಕೂ ನೀರು ನುಗ್ಗಿತ್ತು. ಅಲ್ಲದೆ ಎಂ. ಜಿ. ರಸ್ತೆ, ರೆಸ್ ಕೋರ್ಸ್ ರಸ್ತೆ, ಶಿವಾಜಿನಗರ, ವಿನೋಬಾ ನಗರ, ರಾಜಾಜಿ ನಗರವು ಜಲಾವೃತ್ತವಾಗಿತ್ತು.
ಸುಮಾರು ಮೂರು ತಾಸಿಗೂ ಹೆಚ್ಚು ಹೊತ್ತು ಉದ್ಯಾನ ನಗರಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿತ್ತು. ಇದರಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಜನರ ಸಮಸ್ಯೆಗೆ ಮೇಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲವೊಂದು ವಾಹನಗಳು ನೀರಿನ ಪ್ರವಾಹಕ್ಕೆ ಸಿಲುಕಿ ರಸ್ತೆಯಲ್ಲೇ ನಿಲ್ಲುವಂತಾಗಿತ್ತು. ಮುಂದಿನರೆರಡು ದಿನಗಳ ವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಮಾನ ಇಲಾಖೆ ತಿಳಿಸಿದೆ.