ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂಗೆ ಕಾಂಗ್ರೆಸ್‌ ಶಾಸಕರು-ನಿಮ್ಮೊಂದಿಗೆ ನಾವಿದ್ದೇವೆ? (BJP | Congress | Yeddyurappa | KPCC | Desh pandy | JDS)
Bookmark and Share Feedback Print
 
ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸತತವಾಗಿ ಸೋಲು ಅನುಭವಿಸಿರುವುದು, ಪಕ್ಷದೊಳಗಿನ ಅಸಮಾಧಾನ ಪಕ್ಷಕ್ಕೆ ಉರುಳಾಗುವ ಪರಿಸ್ಥಿತಿ ಎದುರಾಗತೊಡಗಿದೆ. ಅದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್‌ನ ಹಲವು ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಚರ್ಚಿಸಿರುವುದು ರಾಜ್ಯರಾಜಕಾರಣದಲ್ಲಿ ಕುತೂಹಲಕ್ಕೆ ಎಡಮಾಡಿಕೊಟ್ಟಿದೆ.

ಭಾನುವಾರ ಯಡಿಯೂರಪ್ಪ ಅವರನ್ನು ಸುಮಾರು ಹತ್ತು ಮಂದಿ ಶಾಸಕರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆನ್ನಲಾಗಿದೆ. ಇದರಲ್ಲಿ ಹೆಚ್ಚಿನವರು ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದವರು ಎಂದು ಮೂಲವೊಂದು ತಿಳಿಸಿದೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಲ್ಲಿ, ನಾವು ನಿಮ್ಮ ಬೆಂಬಲಕ್ಕೆ ಇದ್ದೇವೆ. ಅಗತ್ಯಬಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ ತಯಾರಾಗಿದ್ದೇನೆ ಎಂದು ಭರವಸೆ ನೀಡಿದ್ದಾರೆನ್ನಲಾಗಿದೆ.

ಆದರೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕರು ಯಾರು ಎಂಬುದು ಬಹಿರಂಗವಾಗಿಲ್ಲ. ಒಂದೆಡೆ ಆಡಳಿತರೂಢ ಬಿಜೆಪಿಯಲ್ಲಿ ಸಚಿವ ಸಂಪುಟ ಪುನಾರಚನೆಯ ನಂತರ ಅಸಮಾಧಾನಗಳು ಸ್ಫೋಟಗೊಳ್ಳುತ್ತಿದ್ದರೆ, ಮತ್ತೊಂದೆಡೆ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಬಿಜೆಪಿ ಬಾಗಿಲು ತಟ್ಟತೊಡಗಿರುವುದು ರಾಜಕೀಯ ವಲಯದಲ್ಲಿ ಮತ್ತೊಂದು ಸಂಚಲನ ಮೂಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ