ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕಿ ಮೋಟಮ್ಮ ತಿಳಿಸಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಒಂದು ವೇಳೆ ಹೈಕಮಾಂಡ್ ಮೈತ್ರಿಗೆ ಸೂಚಿಸಿದರೆ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ವಿದ್ಯುತ್ ದರ ಏರಿಕೆ ಪ್ರಸ್ತಾವಕ್ಕೆ ತಮ್ಮ ವಿರೋಧವಿದೆ ಎಂದ ಪ್ರತಿಪಕ್ಷ ನಾಯಕಿ, ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನು ಆಕಾಂಕ್ಷಿಯಲ್ಲ. ಡಾ.ಜಿ. ಪರಮೇಶ್ವರ್ ಈ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಅವರಿಗೆ ಖಂಡಿತಾ ನನ್ನ ಬೆಂಬಲವಿದೆ ಎಂದರು.