ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬನ್ನೇರುಘಟ್ಟದಲ್ಲಿ ರಾತ್ರಿ ಸಫಾರಿ ನಿಲ್ಲಿಸುವುದಿಲ್ಲ: ಜನಾರ್ದನ ರೆಡ್ಡಿ (Janardana Reddy | Night safari | Bangalore | BJP | Yeddyurappa)
Bookmark and Share Feedback Print
 
ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಫಾರಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತಿರುಗೇಟು ನೀಡುವ ಮೂಲಕ ಅರಣ್ಯ ಸಚಿವ ವಿಜಯಶಂಕರ್ ಅವರ ಆದೇಶಕ್ಕೆ ಅಪಸ್ವರ ಎತ್ತಿದ್ದಾರೆ.

ಅರಣ್ಯ ಸಚಿವ ವಿಜಯ್ ಶಂಕರ್ ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ರಾತ್ರಿ ವೇಳೆ ಸಫಾರಿಯನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಸಫಾರಿಗೆ ಬಜೆಟ್‌ನಲ್ಲಿ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದ್ದು, ಪ್ರವಾಸಿಗರ ಆಕರ್ಷಣೆಯಾಗಿರುವ ನೈಟ್ ಸಫಾರಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.

ರಾತ್ರಿ ಸಫಾರಿ ನಿಲ್ಲಿಸುವುದಾಗಿ ಹೇಳಿರುವ ಅರಣ್ಯ ಸಚಿವ ವಿಜಯಶಂಕರ್ ಅವರೊಂದಿಗೆ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು.

ಪರಿಸರ ರಕ್ಷಣೆ ಸಂಬಂಧ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಜಂಗಲ್ ಲಾಡ್ಜ್‌ಗಳಲ್ಲಿ ಶಿಬಿರ ನಡೆಸಲು ಉದ್ದೇಶಿಸಲಾಗಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಪರಿಶಿಷ್ಟ ಜಾತಿ-ವರ್ಗದ ವಿದ್ಯಾರ್ಥಿಗಳಿಗೆ ಶೇ.80ರಷ್ಟು ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಸಬ್ಸಿಡಿ ನೀಡಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ