ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೈಸೂರು: ಶಶಿಧರ ಪ್ರಸಾದ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ (Mysore | V.V | Deje gow | Bangalore | Criminal case | Acharya)
Bookmark and Share Feedback Print
 
ರಾಜ್ಯಪಾಲರ ವಿರೋಧದ ನಡುವೆಯೂ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಜೆ.ಶಶಿಧರ ಪ್ರಸಾದ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯ ಸರಕಾರ ತೀರ್ಮಾನಿಸಿದೆ.

ನೂತನ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಈ ವಿಷಯ ತಿಳಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಶಿಧರ ಪ್ರಸಾದ್ ಅವರು ನಿವೃತ್ತರಾಗಿದ್ದರಿಂದ ಅವರೀಗ ರಾಜ್ಯಪಾಲರ ವ್ಯಾಪ್ತಿಗೆ ಬರುವುದಿಲ್ಲ. ಆ ನಿಟ್ಟಿನಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದರು.

ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ತಮ್ಮ ಮಗ ಡಾ.ಜೆ.ಶಶಿಧರ್ ಪ್ರಸಾದ್ ವಿಷಯವಾಗಿ ಅನ್ಯಾಯ ನಡೆಯುತ್ತಿದೆ ಎಂದು ಆರೋಪಿಸಿ ಹಿರಿಯ ಸಾಹಿತಿ ದೇ. ಜವರೇ ಗೌಡರು ಇತ್ತೀಚೆಗಷ್ಟೇ ಉಪವಾಸ ಸತ್ಯಾಗ್ರಹ ನಡೆಸಿದ್ದರು. ದೇಜಗೌ ಅವರ ನಡವಳಿಕೆ ಸಾರ್ವಜನಿಕವಾಗಿ ಹಾಗೂ ಖ್ಯಾತ ಸಾಹಿತಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದು ಪುತ್ರ ವ್ಯಾಮೋಹ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಆದರೆ ದೇಜಗೌ ಅವರು ತಮ್ಮ ಪುತ್ರನ ಪರವಾಗಿ ಉಪವಾಸ ಸತ್ಯಾಗ್ರಹ ಮಾಡಿರುವುದು ದುರದೃಷ್ಟಕರ ಎಂದು ಸಾಹಿತಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ