ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯ ಸರಕಾರದಲ್ಲಿ ದಲಿತರ ಕಡೆಗಣನೆ: ಧ್ರುವನಾರಾಯಣ (Chamaraj nagar | BJP | Yeddyurappa | Druva narayana)
Bookmark and Share Feedback Print
 
ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟದಲ್ಲಿ ದಲಿತರನ್ನು ಕಡೆಗಣಿಸಲಾಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ಆಪಾದಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟದಿಂದ ಕೈಬಿಟ್ಟ ಸಚಿವರ ಪೈಕಿ ಮೂವರು ದಲಿತ ಸಮುದಾಯಕ್ಕೆ ಸೇರಿದವರು. ಈಗ ಸಚಿವ ಸಂಪುಟದಲ್ಲಿರುವ ದಲಿತರ ಪೈಕಿ ಆದಿ ದ್ರಾವಿಡ ವರ್ಗಕ್ಕೆ ಸೇರಿದ ಏಕೈಕ ಸಚಿವರಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ. ಬಿಜೆಪಿ ಸರಕಾರ ದಲಿತರ ಬಗ್ಗೆ ತಾತ್ಸಾರ ಹೊಂದಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಆದಿ ದ್ರಾವಿಡ ಸಮುದಾಯದ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸಚಿವ ಸಂಪುಟದಲ್ಲಿ ಆ ಸಮುದಾಯದವರಿಗೆ ಆದ್ಯತೆ ನೀಡಬೇಕು. ಈ ಹಿಂದಿನ ಸರಕಾರಗಳಲ್ಲಿ ಆದಿ ಕರ್ನಾಟಕ ವರ್ಗದ ಮೂರ್ನಾಲ್ಕು ಮಂದಿ ಸಚಿವರಾದರೂ ಇರುತ್ತಿದ್ದರು. ಆದರೆ, ಯಡಿಯೂರಪ್ಪ ಸರಕಾರ ಆ ಸಮುದಾಯವನ್ನು ಕಡೆಗಣಿಸಿದೆ ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೆರೆಯ ಜಿಲ್ಲೆಯ ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಅವರು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಅಭಿವೃದ್ದಿಯೆಡೆಗೆ ಗಮನಹರಿಸಬೇಕು. ಹಿಂದಿನ ಉಸ್ತುವಾರಿ ಸಚಿವರು ಜಿಲ್ಲೆಗೆ ಅತಿಥಿಯಾಗಿದ್ದರು. ನರೇಂದ್ರಸ್ವಾಮಿ ಅವರು ಆ ರೀತಿಯಾಗದೇ ಗಡಿ ಜಿಲ್ಲೆಯ ಬೆಳವಣಿಗೆಗೆ ಶ್ರಮಿಸಬೇಕು ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ