ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರಕಾರದಿಂದ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರಿಗೆ ಅನ್ಯಾಯ: ಹೊರಟ್ಟಿ (Basava raj horatty | BJP | Yeddyurappa | Congress | JDS)
Bookmark and Share Feedback Print
 
ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದಲ್ಲಿ 2002ರಲ್ಲಿ ನಡೆಸಿದ ಹೋರಾಟದಂತೆ ಮತ್ತೊಂದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಮಸ್ಯೆ ಕುರಿತು ಚರ್ಚಿಸಲು ಅ. 3ರಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನ ಜಯನಗರದ ಆರ್‌ವಿ ರಸ್ತೆ ಬಳಿಯಿರುವ ಆರ್‌ವಿ ಶಿಕ್ಷಕರ ಸಭಾ ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಶಿಕ್ಷಕರ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಗುತ್ತಿದ್ದು, ಸಾವಿರಕ್ಕಿಂತಲೂ ಹೆಚ್ಚಿನ ಪ್ರತಿಧಿನಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರೌಢ ಶಾಲೆ ಸಹ ಶಿಕ್ಷಕರು ಮತ್ತು ಪ.ಪೂ. ಕಾಲೇಜು ಉಪನ್ಯಾಸಕರಿಗೆ ಕಳೆದ 20 ವರ್ಷಗಳಿಂದ ವೇತನ ತಾರತಮ್ಯ ಮಾಡಲಾಗುತ್ತಿದೆ. ಸರಕಾರ ಶೀಘ್ರವೇ ಇದನ್ನು ನಿವಾರಿಸಬೇಕು. ಕೇಂದ್ರ ಸರಕಾರದ 6ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನ ಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ