ನಾನೆಂದಿಗೂ ಅಧಿಕಾರಕ್ಕೆ ಅಂಟಿ ಕುಳಿತಿಲ್ಲ. ಕೇಂದ್ರ ಸರಕಾರ ಕರೆಯಿಸಿಕೊಂಡರೆ ವಾಪಸ್ ಹೋಗಲು ಸಿದ್ಧ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿರುವುದರ ವಿರುದ್ಧ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರಪತಿಗಳು, ಕೇಂದ್ರ ಸರಕಾರ ಹಿಂದಕ್ಕೆ ಕರೆಸಿಕೊಂಡರೆ ಹೋಗಲು ಸಿದ್ಧ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯಕ್ಕೆ ಹೋಗಲು ಎಲ್ಲರಿಗೂ ಅವಕಾಶವಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದರು.
ಅಕ್ರಮ-ಸಕ್ರಮ ಮಸೂದೆ ವಿವಾದ ಹೈಕೋರ್ಟ್‌ನಲ್ಲಿದೆ. ಈ ಬಗ್ಗೆ ನ್ಯಾಯಾಲಯವೇ ಉತ್ತರ ನೀಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಜ್ಯಪಾಲರು, ವಿಟಿಯು ಕುಲಪತಿ ಎಸ್.ಮಹೇಶಪ್ಪ ಅವರ ನೇಮಕಕ್ಕೆ ಸಂಬಂಧಿಸಿದಂತೆ ದಾಖಲೆ ತರಿಸಿಕೊಂಡು ಪರಿಶೀಲಿಸುವಂತೆ ತಮ್ಮ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ತಿಳಿಸಿದರು.
ಮೈಸೂರು ವಿವಿ ಇಎಂಎಂಆರ್‌ಸಿಯ ನೇಮಕ ಅಕ್ರಮದ ಬಗ್ಗೆ ಗಮನದಸೆಳೆದಾಗ, ವಿಶ್ವವಿದ್ಯಾನಿಲಯಗಳಲ್ಲಿ ನೇಮಕ ನನ್ನ ವ್ಯಾಪ್ತಿಗೆ ಬರುವುದಿಲ್ಲ. ಕುಲಪತಿ ನೇಮಕವಷ್ಟೇ ನನ್ನ ಕೆಲಸ. ನೇಮಕ ಸರಕಾರ ಮತ್ತು ವಿವಿಗೆ ಸಂಬಂಧಿಸಿದ್ದು, ಈ ಬಗ್ಗೆ ಸರಕಾರದ ಸಂಬಂಧಪಟ್ಟ ಇಲಾಖೆ ಪರಿಶೀಲಿಸಲಿದೆ ಎಂದರು.