ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲಂಚ ನೀಡುತ್ತಿದ್ದಾಗ ಕಟ್ಟಾ ಪುತ್ರ ಲೋಕಾಯುಕ್ತ ಬಲೆಗೆ (KIADB | Katta Jagadish | Lokayuktha | BBMP | Bribe)
Bookmark and Share Feedback Print
 
PR
ರಾಜ್ಯ ರಾಜಕೀಯದಲ್ಲಿ ಈಗಾಗಲೇ ವಿವಾದ ಹುಟ್ಟಿಸಿರುವ ಕೆಐಎಡಿಬಿ ಹಗರಣದ ಮಹತ್ವದ ಬೆಳವಣಿಗೆ ಎಂಬಂತೆ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಜಗದೀಶ್ ನಾಯ್ಡು ಕೆಐಎಡಿಬಿ ಪ್ರಕರಣದ ಸಾಕ್ಷಿದಾರೊಬ್ಬರಿಗೆ ಗಾಂಧಿನಗರದ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.

ಕೆಐಎಡಿಬಿ ಹಗರಣದ ಪ್ರಕರಣದ ಕುರಿತಂತೆ ಸಾಕ್ಷಿದಾರ ರಾಮಾಂಜಿನಪ್ಪ ಅವರಿಗೆ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಿಢೀರನೆ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಾ ಜಗದೀಶ್ ನಾಯ್ಡು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಆಡಳಿತಾರೂಢ ಬಿಜೆಪಿ ಪಕ್ಷವನ್ನು ಮತ್ತೊಂದು ಇಕ್ಕಟ್ಟಿಗೆ ಸಿಲುಕಿಸಿದೆ.

ಬುಧವಾರ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಗರಣದಲ್ಲಿ ಸಿಲುಕಿರುವ ಬಿಜೆಪಿ ಸದಸ್ಯ ಜಗದೀಶ್ ನಾಯ್ಡುವನ್ನು ಅಮಾನತು ಮಾಡುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದರು. ಆದರೆ ಹಗರಣದಲ್ಲಿ ನಾಯ್ಡು ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ. ಆ ನಿಟ್ಟಿನಲ್ಲಿ ಅವರನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ ಎಂದು ಮೇಯರ್ ಕೆ.ಎಸ್.ನಟರಾಜ್ ತಿರುಗೇಟು ನೀಡಿದ್ದರು.

ಅಷ್ಟೇ ಅಲ್ಲ ಕೆಐಎಡಿಬಿ ಹಗರಣದಲ್ಲಿ ಸಚಿವ ಕಟ್ಟಾ ಹಾಗೂ ಪುತ್ರ ಜಗದೀಶ್ ಕಟ್ಟಾ ಷಾಮೀಲಾಗಿರುವುದಾಗಿ ಕಾಂಗ್ರೆಸ್, ಜೆಡಿಎಸ್ ಈ ಮೊದಲು ಆರೋಪಿಸಿ, ರಾಜೀನಾಮೆಗೆ ಆಗ್ರಹಿಸಿತ್ತು. ತಾನು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ, ಲೋಕಾಯುಕ್ತರು ತನಿಖೆ ನಡೆಸುತ್ತಿದ್ದು ಸತ್ಯಾಂಶ ಹೊರಬೀಳಲಿದೆ ಎಂದು ಕಟ್ಟಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಜಾಯಿಷಿ ನೀಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ