ಕೆಐಎಡಿಬಿ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಸಚಿವ ಕಟ್ಟಾ ಸುಬ್ರಮಣ್ಯಂ ನಾಯ್ಡು ರಾಜೀನಾಮೆ ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಭೂ ಹಗರಣದಲ್ಲಿ ಕಟ್ಟಾ ಪಾಲ್ಗೊಂಡಿದ್ದಾರೆ ಎನ್ನುವ ಆರೋಪಗಳು ಸುಳ್ಳಿನ ಕಂತೆಯಾಗಿದ್ದು, ಕಟ್ಟಾ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷಗಳು ಅನಾವಶ್ಯಕವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ ತಾವು ಸೊಪ್ಪು ಹಾಕುವುದಿಲ್ಲ. ವಿದೋಧ ಪಕ್ಷಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಟ್ಟಾ ಸುಬ್ರಮಣ್ಯಂ ಮಾತನಾಡಿ, ತಮ್ಮ ಪುತ್ರನ ವಿರುದ್ಧ ರಾಜಕೀಯ ಸಂಚು ನಡೆದಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ಲಂಚ ನೀಡಿಕೆ ಪ್ರಕರಣದಲ್ಲಿ ಬಂಧಿತನಾದ ಕಟ್ಟಾ ಪುತ್ರನಿಗೆ, ಅಕ್ಟೋಬರ್ 12 ರವರೆಗೆ ನ್ಯಾಯಾಂಗ ಬಂಧನದ ಆದೇಶ ಹೊರಡಿಸಲಾಗಿದೆ.