ಕೆಐಎಡಿಬಿ ಹಗರಣದಲ್ಲಿ ಸಾಕ್ಷ್ಯ ನಾಶಪಡಿಸಲು ಲಂಚ ನೀಡುತ್ತಿರುವ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಸೆರೆಮನೆವಾಸ ಅನುಭವಿಸುತ್ತಿರುವ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಕಟ್ಟಾ ಜಗದೀಶ್ ನಾಯ್ಡುಗೆ ಜಾಮೀನು ನೀಡದಂತೆ ಲೋಕಾಯುಕ್ತ ಪರ ವಕೀಲರು ಸೋಮವಾರ ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಪರ ವಕೀಲರು ಆಕ್ಷೇಪಣಾ ಅರ್ಜಿ ಸಲ್ಲಿಸಿದ ನಂತರ, ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಈ ಸಂದರ್ಭದಲ್ಲಿ ಲೋಕಾಯುಕ್ತ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದೆ.
ಸೆರೆಮನೆವಾಸದಲ್ಲಿರುವ ಕಟ್ಟಾ ಜಗದೀಶ್ ನಾಯ್ಡು ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ನಾಯ್ಡುಗೆ ಜಾಮೀನು ನೀಡದಂತೆ ಲೋಕಾಯುಕ್ತ ಆಕ್ಷೇಪಣಾ ಅರ್ಜಿ ಸಲ್ಲಿಸಿದೆ. ವಾದ-ವಿವಾದವನ್ನು ಆಲಿಸಿದ ನಂತರ ನ್ಯಾಯಾಧೀಶ ಇಪ್ಪರಗಿ ಅವರು ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.