ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲಂಚ ಪುರಾಣ: ಕಟ್ಟಾ ಜಗದೀಶ್ ಜಾಮೀನು ಅರ್ಜಿ ವಜಾ (KIADB | Katta Jagadish | BBMP | Lokayuktha | Court)
Bookmark and Share Feedback Print
 
ಕೆಐಎಡಿಬಿ ಭೂ ಹಗರಣದ ಸಾಕ್ಷ್ಯ ನಾಶಪಡಿಸಲು ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ದಾಳಿಗೆ ಸಿಕ್ಕಿ ಬಿದ್ದು ನ್ಯಾಯಾಲಯದಲ್ಲಿ ಜಾಮೀನಿಗಾಗಿ ಬಿಬಿಎಂಪಿ ಸದಸ್ಯ ಕಟ್ಟಾ ಜಗದೀಶ್ ಸಲ್ಲಿಸಿದ್ದ ಅರ್ಜಿಯನ್ನು 23ನೆ ಹೆಚ್ಚುವರಿ ಮತ್ತು ಸಿವಿಲ್ ನ್ಯಾಯಾಧೀಶರಾದ ಹಿಪ್ಪರಗಿ ಮಂಗಳವಾರ ವಜಾ ಮಾಡಿದ್ದಾರೆ.

ಸಾಕ್ಷ್ಯ ಹೇಳದಂತೆ ರಾಮಾಂಜಿನಪ್ಪ ಎಂಬವರಿಗೆ ಒಂದು ಲಕ್ಷ ರೂಪಾಯಿ ನೀಡುತ್ತಿದ್ದಾಗ ಕಟ್ಟಾ ಜಗದೀಶ್ ಲೋಕಾಯುಕ್ತ ಪೊಲೀಸ್ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಮಗನನ್ನು ರಕ್ಷಿಸಲು ಮುಂದಾಗಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಹಿಪ್ಪರಗಿ ವಜಾ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರು ಕಟ್ಟಾ ಜಗದೀಶ್‌ಗೆ ಜಾಮೀನು ನೀಡಬಾರದೆಂದು ಆಕ್ಷೇಪಣೆ ಸಲ್ಲಿಸಿದ್ದರು.

ಒಂದು ವೇಳೆ ಜಾಮೀನು ಸಿಕ್ಕಿದರೆ ಕಟ್ಟಾ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ ಎಂದು ಲೋಕಾಯುಕ್ತ ಮನವಿಯಲ್ಲಿ ತಿಳಿಸಿತ್ತು. ಮನವಿ ಪರಿಗಣಿಸಿದ ನ್ಯಾಯಾಲಯ ಕಟ್ಟಾ ಜಗದೀಶ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ