ಆಡಳಿತರೂಢ ಬಿಜೆಪಿ ಪಕ್ಷದ ಶಾಸಕರು ಬಂಡಾಯ ಎದ್ದಿರುವುದು ನಿಜ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿನ ಶಾಸಕರು ಬಂಡಾಯ ಎದ್ದಿರುವುದನ್ನು ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ. ತಮ್ಮವರು ಬಂಡಾಯ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್‌ವೊಂದನ್ನು ಸಿಡಿಸಿದ್ದಾರೆ.
ಆದರೆ ಬಿಜೆಪಿ ಸರಕಾರಕ್ಕೆ ಯಾವುದೇ ಗಂಡಾಂತರವಿಲ್ಲ. ಐದು ವರ್ಷ ಆಡಳಿತವನ್ನು ಪೂರೈಸಲಿದೆ ಎಂದು ಹೇಳಿ ಕುತೂಹಲ ಕೆರಳಿಸಿದ್ದಾರೆ. ಕೆಐಎಡಿಬಿ ಹಗರಣ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದು ಹೇಳಿದರು.