ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪುಣೆ ರೆಸಾರ್ಟ್‌ನಿಂದ ಮರಳಿದ ಕಾಂಗ್ರೆಸ್ ಶಾಸಕರು (Karnataka | Congress | Pune | Political Crisis)
Bookmark and Share Feedback Print
 
ಕಳೆದು ಎರಡು ದಿನಗಳಿಂದ ಪುಣೆಯಲ್ಲಿ ಬೀಡು ಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ಶಾಸಕರ ಒಂದು ತಂಡ ಭಾನುವಾರ ಬೆಂಗಳೂರಿಗೆ ಹಿಂತಿರುಗಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಹಲವು ವಿದ್ಯಾಮಾನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ 60 ಮಂದಿ ಶಾಸಕರು ಪುಣೆ ರೆಸಾರ್ಟ್‌ನಲ್ಲಿ ಠಿಕಾಣಿ ಹೂಡಿದ್ದರು. ಇದೀಗ ನಾಳೆ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಬಹುಮತ ಸಾಬೀತುಪಡಿಸಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಮರಳಿದೆ.

ಮೊದಲ ತಂಡದಲ್ಲಿ 16 ಮಂದಿ ಶಾಸಕರು ಮರಳಿದ್ದು, ಸಂಜೆಯ ಹೊತ್ತಿಗೆ ಎಲ್ಲಾ ಶಾಸಕರು ಆಗಮಿಸುವ ನಿರೀಕ್ಷೆಯಿದೆ. ಯಾವುದೇ ಆಸೆ ಆಮಿಷಗಳಿಗೆ ಶಾಸಕರು ಬಲಿಯಾವುದುದಿಲ್ಲ ಎಂದು ಪಕ್ಷ ತಿಳಿಸಿದೆ.

ಅದೇ ಹೊತ್ತಿಗೆ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಒಂದು ವೇಳೆ ಶಾಸಕರನ್ನು ಅನರ್ಹಗೊಳಿಸಿದರೆ ಕಾನೂನು ಹೋರಾಟಕ್ಕೆ ಮುಂದಾಗಲಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ