ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಂಗೀಕುಸ್ತಿ-ಎಲ್ಲಾ ಮುಗಿದಿಲ್ಲ...ಕಾದು ನೋಡಿ!: ಕುಮಾರಸ್ವಾಮಿ (BJP | Yeddyurappa | Kumaraswamy | JDS | Bharadwaj | Congress)
Bookmark and Share Feedback Print
 
NRB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ವಿಶ್ವಾಸಮತ ಸಾಬೀತುಪಡಿಸುವುದು ಪ್ರತಿಪಕ್ಷಗಳಿಗೆ ಹಿನ್ನಡೆ-ಮುನ್ನಡೆಯ ಪ್ರಶ್ನೆಯೇ ಇಲ್ಲ. ಅವೆಲ್ಲ ಕೋರ್ಟ್ ವಿಚಾರ ಹೊರಬಿದ್ದ ನಂತರವೇ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಬದಲಾದ ರಾಜಕೀಯ ಬದಲಾವಣೆಯಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಯಡಿಯೂರಪ್ಪನವರಿಗೆ ಎರಡನೇ ಬಾರಿಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚನೆ ನೀಡಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರಲ್ಲಿ ಅಸಮಾಧಾನ ಮೂಡಿಸಿದೆ. ಈ ಹಿನ್ನೆಲೆಯಲ್ಲಿಯೇ ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ರಾಜ್ಯಪಾಲರ ಬಳಿ ತೆರಳಿ, ನಾಳಿನ ವಿಶ್ವಾಸಮತ ಯಾಚನೆಯ ದಿನಾಂಕ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಆದರೆ ರಾಜ್ಯಪಾಲರು ಪ್ರತಿಪಕ್ಷಗಳ ಮನವಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆನ್ನಲಾಗಿದೆ.

ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾಳಿನ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಬಿಜೆಪಿಯದ್ದೇ ಎಂದೇ ಯಡಿಯೂರಪ್ಪ ಬೀಗುತ್ತಿದ್ದಾರೆ. ಹಾಗಂತ ಎಲ್ಲವೂ ನಾಳೆಯೇ ಮುಗಿದಿಲ್ಲ. ಕಾದು ನೋಡಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಹಿನ್ನಡೆ ಮುನ್ನಡೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಯಾಕೆಂದರೆ ಕೋರ್ಟ್ ಅಂತಿಮ ತೀರ್ಪಿನ ನಂತರವೇ ಸರಕಾರದ ಹಣೆಬರಹ ತಿಳಿಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಿಪ್ ಜಾರಿ: ನಾಳೆ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಬಿಜೆಪಿಯ 106 ಶಾಸಕರು ಮತ ಚಲಾಯಿಸುವಂತೆ ಸೂಚಿಸಿ ವಿಪ್ ಜಾರಿ ಮಾಡಿದೆ. ಅದೇ ರೀತಿ ಆಸ್ಪತ್ರೆಯಲ್ಲಿರುವ ಈಶಣ್ಣ ಗುಳಣ್ಣನವರ್ ಕೂಡ ವಿಶ್ವಾಸಮತ ಯಾಚನೆಯ ಹಿನ್ನೆಲೆಯಲ್ಲಿ ಸದನಕ್ಕೆ ಆಗಮಿಸಿ ಮತ ಚಲಾಯಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಅದೇ ರೀತಿ ಎರಡನೇ ಬಾರಿಗೆ ಬಹುಮತ ಸಾಬೀತುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಸರಕಾರದ ವಿರುದ್ಧ ಮತ ಚಲಾಯಿಸುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ನಿಷೇಧಾಜ್ಞೆ: ಸರಕಾರದ ವಿಶ್ವಾಸಮತ ಯಾಚನೆ ನಿಟ್ಟಿನಲ್ಲಿ ನಗರದಾದ್ಯಂತ ಬುಧವಾರ ಮಧ್ಯರಾತ್ರಿಯಿಂದ 14ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಹೇರಿದ್ದು,ಸಾರ್ವಜನಿಕರು ಸಹಕರಿಸುವಂತೆ ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಮನವಿ ಮಾಡಿಕೊಂಡಿದ್ದಾರೆ.

ಕಲಾಪ ನೇರ ಪ್ರಸಾರಕ್ಕೆ ಅವಕಾಶ-ವಿಶೇಷ ಬಂದೋಬಸ್ತ್-ಬೋಪಯ್ಯ:ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸಮತ ಯಾಚಿಸುವ ನಿಟ್ಟಿನಲ್ಲಿ ಸದನದಲ್ಲಿ ಯಾವುದೇ ಅಹಿತಕರ ಘಟನೆ, ಗದ್ದಲ ನಡೆಯದಂತೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ 149 ಮಾರ್ಷಗಳನ್ನು ನಿಯೋಜಿಸಲಾಗಿದೆ. ಸೋಮವಾರ ನಡೆದಂತಹ ಘಟನೆ ಮರುಕಳಿಸದಂತೆ ಹೆಚ್ಚಿನ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ ಎಂದರು. ಅಲ್ಲದೇ, ಶಾಸಕರಿಗೆ ಪಶ್ಚಿಮ ದ್ವಾರದ ಮೂಲಕ ಪ್ರವೇಶಿಸ ಕಲ್ಪಿಸಲಾಗಿದೆ. ವಿಧಾನಸೌಧದ ಹೊರಗಡೆ ಪೊಲೀಸರನ್ನು ಕೂಡ ಭದ್ರತೆಗೆ ನಿಯೋಜಿಸಲಾಗಿದೆ. ಅಷ್ಟೇ ಅಲ್ಲ ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಆವರಣದೊಳಗೂ ಪ್ರವೇಶಿಸುವಂತಿಲ್ಲ ಎಂದು ಬೋಪಯ್ಯ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ನೇರ ಪ್ರಸಾರಕ್ಕೆ ಅವಕಾಶ: ಏತನ್ಮಧ್ಯೆ ಸೋಮವಾರ ವಿಧಾನಸಭಾ ಕಲಾಪದ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಗುರುವಾರ ವಿಧಾನಸಭಾ ಕಲಾಪವನ್ನು ನೇರಪ್ರಸಾರ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬೋಪಯ್ಯ ತಿಳಿಸಿದರು. ಆದರೆ ಒಳಗಡೆ ಕೇವಲ ಒಂದು ಕ್ಯಾಮರಾಕ್ಕೆ ಮಾತ್ರ ಅವಕಾಶ, ಪತ್ರಕರ್ತರು ತಮ್ಮ ಗ್ಯಾಲರಿಯಲ್ಲೇ ಕುಳಿತು ವರದಿ ಮಾಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷೇತರರಿಗೆ ಮತದಾನಕ್ಕೆ ಅವಕಾಶವಿಲ್ಲ-ಹೈಕೋರ್ಟ್ ತೀರ್ಪು ಅಂತಿಮ

ಯು-ಟರ್ನ್:ಮತ್ತೆ ಬಿಜೆಪಿಗೆ ವರ್ತೂರ್ ಬೆಂಬ

ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ-ಪ್ರಧಾನಿಗೆ ಬಿಜೆಪಿ
ಸಂಬಂಧಿತ ಮಾಹಿತಿ ಹುಡುಕಿ