ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹೈಕೋರ್ಟ್ ಷರತ್ತಿನೊಂದಿಗೆ ಬಿಜೆಪಿ ವಿಶ್ವಾಸಮತ (BJP | Hicourt | Congress | Political Crisis)
Bookmark and Share Feedback Print
 
ವಿಶ್ವಾಸಮತ ಯಾಚನೆ ತನ್ನ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂಬ ಹೈಕೋರ್ಟ್ ಷರತ್ತಿನ ಮೇಲೆ ರಾಜ್ಯ ಬಿಜೆಪಿ ಸರಕಾರವು ನಾಲ್ಕು ದಿನಗಳೊಳಗೆ ಇದೀಗ ಎರಡನೇ ಬಾರಿಗೆ ವಿಶ್ವಾಸಮತ ಯಾಚನೆಗೆ ಸಿದ್ಧವಾಗಿದೆ.

ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ವಿಧಾನಸಭೆಯ ಸ್ಪೀಕರ್ ಕೆ.ಜಿ. ಬೋಪಯ್ಯ ಕ್ರಮವನ್ನು ಪ್ರಶ್ನಿಸಿ ಐದು ಮಂದಿ ಪಕ್ಷೇತರರು ಅರ್ಜಿ ಸಲ್ಲಿಸಿದ್ದರು. ನಂತರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಗುರುವಾರ ನಡೆಯಲಿರುವ ಸರ್ಕಾರದ ವಿಶ್ವಾಸಮತ ಯಾಚನೆ ತನ್ನ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂಬ ಮಧ್ಯಂತರ ಆದೇಶ ನೀಡಿತ್ತು.

ಆದರೆ ಹೈಕೋರ್ಟ್ ನೀಡಿದ ತನ್ನ ಮಧ್ಯಂತರ ತೀರ್ಪಿನಲ್ಲಿ ಅನರ್ಹರಾದ ಶಾಸಕರು ವಿಧಾನಸಭೆ ಪ್ರವೇಶಿಸುವಂತಿಲ್ಲ. ಅದೇ ರೀತಿ ಮತ ಚಲಾಯಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಇದರಿಂದ ಇಂದು ನಡೆಯಲಿರುವ ವಿಶ್ವಾಸ ಮತಯಾಚನೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು ಬಹುಮತ ಸಾಬೀತುಪಡಿಸುವುದು ಬಹುತೇಕ ಖಚಿತವಾಗಿದೆ. ಆದರೆ ಗುರುವಾರ ಹೊರಹೊಮ್ಮುವ ಫತಿತಾಂಶವು ಹೈಕೋರ್ಟ್‌ನ ಅಂತಿಮ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.

ಅದೇ ಹೊತ್ತಿಗೆ ಮಾತನಾಡಿರುವ ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ನಾವು ಬಹುಮತ ಸಾಬೀತುಪಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ, ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ಎರಡೂವರೆ ವರ್ಷಗಳ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿದ್ದೇವೆ. ಪ್ರತಿಪಕ್ಷಗಳು ನೀಡುವ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಲು ಸರಕಾರ ಸಿದ್ಧವಿದೆ ಎಂದವರು ಸೇರಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ