ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲಂಚ ಪುರಾಣ: ಕಟ್ಟಾ ಜಗದೀಶ್ ಬಿಡುಗಡೆ (Katta Jagadish | Subramanya Naidu | Yeddyurappa | Parappana Agrahara)
Bookmark and Share Feedback Print
 
ಸಾಕ್ಷಿಯೊಬ್ಬರಿಗೆ ಲಂಚ ನೀಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಬಿಎಂಪಿ ಸದಸ್ಯ, ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ ಕಟ್ಟಾ ಜಗದೀಶ್‌ ಅವರು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬುಧವಾರ ರಾತ್ರಿ ಬಂಧಮುಕ್ತಗೊಂಡಿದ್ದಾರೆ.

ಜಗದೀಶ್ ಅವರ ಬಿಡುಗಡೆಗೆ ಹೈಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ 7ಗಂಟೆ ಸುಮಾರಿಗೆ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೆಐಎಡಿಬಿ ಪರಿಹಾರ ವಿತರಣೆ ಹಗರಣದ ಸಾಕ್ಷಿದಾರ ಅಂಜಿನಪ್ಪ ಎಂಬವರಿಗೆ ಸಾಕ್ಷಿ ಹೇಳದಂತೆ ಒತ್ತಡ ಹೇರಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿಯೇ ಕಟ್ಟಾ ಜಗದೀಶ್ ಲೋಕಾಯುಕ್ತ ಪೊಲೀಸರ ಸೆರೆಗೆ ಸಿಕ್ಕಿದ್ದರು. ಪೊಲೀಸರು ಸೆ.30ರಂದು ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಏತನ್ಮಧ್ಯೆ, ತನ್ನ ಪುತ್ರ ಜಗದೀಶನನ್ನು ಸಂಚು ರೂಪಿಸಿ ಲೋಕಾಯುಕ್ತ ಬಲೆಗೆ ಸಿಲುಕಿಸಲಾಗಿದೆ ಎಂದು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಆರೋಪಿಸಿದ್ದರು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಸಂಬಂಧಿತ ಮಾಹಿತಿ ಹುಡುಕಿ