ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಿರುಗೇಟು: ಕಾಂಗ್ರೆಸ್-ಜೆಡಿಎಸ್‌ ಶಾಸಕರಿಗೆ ಬಿಜೆಪಿ ಗಾಳ? (BJP | Congress | JDS | Yeddyurappa | Kumaraswamy | Janardana Reddy)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಸರಕಾರವನ್ನು ಪತನಗೊಳಿಸಲು ಸಂಚು ರೂಪಿಸಿರುವ ವಿಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಬಿಜೆಪಿ ಮುಂದಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರಕಾರದ ಬಲ ಹೆಚ್ಚಿಸಿಕೊಳ್ಳಲು ಬಳ್ಳಾರಿ ರೆಡ್ಡಿ ಸಹೋದರರು ಮತ್ತೆ ಆಪರೇಶನ್ ಕಮಲದ ಮೂಲಕ ಕೆಲವು ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಜತೆ ನಿರಂತರ ಸಂಪರ್ಕದಲ್ಲಿರುವ ಬಳ್ಳಾರಿಯ ರೆಡ್ಡಿ ಸಹೋದರರು ರಾಜೀನಾಮೆ ಕೊಡಿಸುವ ಕಾರ್ಯಾಚರಣೆಗೆ ಇಳಿಯಲಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಬಿಜೆಪಿ ಪಾಳಯದಲ್ಲಿಯೇ ಅಸಮಾಧಾನ ವ್ಯಕ್ತವಾಗಿದೆ.

ಸಚಿವ ಸ್ಥಾನದ ಭರವಸೆ ಸಿಕ್ಕಿರುವ ತುಮಕೂರಿನ ಕಾಂಗ್ರೆಸ್ ಶಾಸಕರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರಂತೆ. ಇದಕ್ಕೆ ಅನುಮತಿ ನೀಡಿ ಎಂದು ಸಚಿವ ಜನಾರ್ದನ ರೆಡ್ಡಿ ಅವರು ಯಡಿಯೂರಪ್ಪ ಮುಂದೆ ಮನವಿ ಮಾಡಿಕೊಂಡಿದ್ದಾರೆನ್ನಲಾಗಿದೆ.

ಕಾಂಗ್ರೆಸ್, ಬಿಜೆಪಿ ಶಾಸಕರು ನಿರಂತರವಾಗಿ ಸರಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸುತ್ತಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಆಪರೇಶನ್ ಕಮಲ ನಡೆಸುವುದೇ ತಿರುಗೇಟು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಸಲಾಗಿದೆ ಎಂದು ಉನ್ನತ ಮೂಲವೊಂದು ತಿಳಿಸಿದೆ.

ವರ್ತೂರ್‌ಗೆ ಸಚಿವ ಸ್ಥಾನ?: ಜೆಡಿಎಸ್ ಪಾಳಯದಲ್ಲಿ ಗುರುತಿಸಿಕೊಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ಪಕ್ಷೇತರ ಶಾಸಕ ದಿಢೀರ್ ಉಲ್ಟಾ ಹೊಡೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ವರ್ತೂರು ಪ್ರಕಾಶ್‌ಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ.

ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಆರು ಸ್ಥಾನಗಳು ಖಾಲಿಯಾಗಿದ್ದು ಬಿಜೆಪಿಗೆ ಬೆಂಬಲ ಘೋಷಿಸಿದ್ದ ವರ್ತೂರ್‌ಗೆ ಒಂದು ಸ್ಥಾನ ನೀಡಲು ಚರ್ಚೆ ನಡೆದಿದೆ. ಅದೇ ರೀತಿ ಬಂಡಾಯ ಬಾವುಟ ಹಾರಿಸಿ ಬಿಜೆಪಿ ವಾಪಸಾದ ನರಸಿಂಹ ನಾಯಕ್, ಸಚಿವ ಸ್ಥಾನದ ಆಕಾಂಕ್ಷಿಯಾದ ಸಿ.ಟಿ.ರವಿ, ಡಿ.ಎನ್.ಜೀವರಾಜ್‌ಗೂ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ