ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂಸ್ವಾಧೀನ ಹಗರಣ:ನಿವೃತ್ತ ಕೆಎಎಸ್ ಅಧಿಕಾರಿಗೆ ಜಾಮೀನು (Kiadb | Land dispute | Bail)
Bookmark and Share Feedback Print
 
ಕೆಐಎಡಿಬಿ ಭೂಸ್ವಾಧೀನ ಹಗರಣದ ಪ್ರಮುಖ ಆರೋಪಿಗಳಾಗಿದ್ದ ನಿವೃತ್ತ ಕೆಎಎಸ್ ಅಧಿಕಾರಿಗಳಿಗೆ ಹೈಕೋರ್ಟ್ ಶರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಭೂಸ್ವಾಧೀನ ಹಗರಣದಲ್ಲಿ ಪ್ರಮುಖ ಆರೋಪಿಗಳಾದ ಟಿ.ಪಿ ಮುನಿನಾರಾಯಣಪ್ಪ ಮತ್ತು ಖಾಸಗಿ ಮಧ್ಯವರ್ತಿಯಾಗಿದ್ದ ಸಂತೋಷ್‌‍‌ಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ ಎಂದು ನ್ಯಾಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಯಮೂರ್ತಿ ವಿ.ಜಗನ್ನಾಥನ್ ನೇತೃತ್ವದ ನ್ಯಾಯಪೀಠ, ಇಬ್ಬರು ಆರೋಪಿಗಳ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ನೂರಾರು ಕೋಟಿ ರೂಪಾಯಿಗಳ ಹಗರಣ ನಡೆದಿದ್ದು,ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ